Wednesday, July 22, 2026
spot_imgspot_img
spot_imgspot_img

ಸಾರಿಗೆ ಬಸ್‌ ಪಲ್ಟಿ – ವಿದ್ಯಾರ್ಥಿ ಸಾವು, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

- Advertisement -
- Advertisement -

ದಾವಣಗೆರೆ: ಆ್ಯಕ್ಸಲ್ ತುಂಡಾಗಿ ಸಾರಿಗೆ ಬಸ್‌ ಪಲ್ಟಿಯಾದ ಘಟನೆ ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20 ಮಂದಿ ಸ್ಥಿತಿ ಗಂಭೀರವಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಯುವಕನನ್ನು ದರ್ಶನ್ (21) ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!