ಬಾಗಲಕೋಟೆ: ಜಿಲ್ಲೆಯ ಗುಗ್ಗಲಮರಿ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ವೇಳೆ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 2.30 ಲಕ್ಷ ರೂ. ನಗದು ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಲೋಕೋಪಯೋಗಿ ಇಲಾಖೆಯ ಕಿರಿಯ ಅಭಿಯಂತರ ಎಂ.ಎಚ್.ಕೋತ್ತವಾಲ ಅವರ ನೇತೃತ್ವದ ಫ್ಲೈಯಿಂಗ್ ಸ್ಕ್ವಾಡ್ ತಂಡ (ಎಫ್‌ಎಸ್‌ಟಿ) ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ, ಕಾರಿನಲ್ಲಿ ಸಾಗಿಸಲಾಗುತ್ತಿದ್ದ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.
ಸೂಕ್ತ ದಾಖಲೆಗಳಿಲ್ಲದೆ ಹಣ ಸಾಗಿಸಲಾಗುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾಗಲಕೋಟೆ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ, ಗಡಿ ಭಾಗದಲ್ಲಿರುವ ಇಲಕಲ್ ಪಟ್ಟಣದ ಸಮೀಪದ ಚೆಕ್‌ಪೋಸ್ಟ್‌ನಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಯುತ್ತಿದೆ.
ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.