Sunday, April 28, 2024
spot_imgspot_img
spot_imgspot_img

ಆಧುನಿಕ ಶ್ರವಣ ಕುಮಾರ – ಹಳೆ ಸ್ಕೂಟರ್‌ನಲ್ಲಿ ತಾಯಿಯೊಂದಿಗೆ ದೇಶ ಸುತ್ತಾಟ

- Advertisement -G L Acharya panikkar
- Advertisement -
This image has an empty alt attribute; its file name is balavikas-866x1024.jpg

ರಾಮಾಯಣ ಕಾಲದಲ್ಲಿ ಪುತ್ರ ಭಕ್ತಿಗೆ ಹೆಸರಾದವನು ಶ್ರವಣ ಕುಮಾರ. ಇದೀಗ ಮೈಸೂರಿನ ಈ ಕೃಷ್ಣಕುಮಾರ್ ತನ್ನ ತಾಯಿಯನ್ನು ಭಾರತದಾದ್ಯಂತ ತೀರ್ಥಕ್ಷೇತ್ರಗಳ ದರ್ಶನ ಮಾಡಿಸಿ, ವಿದೇಶಗಳನ್ನೂ ತೋರಿಸಿ ಇದೀಗ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾದ ಗೋಕರ್ಣದ ಕಡೆ ಹೊರಟಿದ್ದಾರೆ. ಈ ಮೂಲಕ ಆಧುನಿಕ ಶ್ರವಣ ಕುಮಾರ ಎನಿಸಿಕೊಂಡಿದ್ದಾರೆ.

ಹೌದು ಮೈಸೂರಿನ ಕೃಷ್ಣಕುಮಾರ್ ತಮ್ಮ ಹಳೆಯ ಬಜಾಜ್ ಚೇತಕ್ ಸ್ಕೂಟರ್‌ನಲ್ಲಿ ವಯೋವೃದ್ಧ ತಾಯಿ ಚೂಡಾಲಮ್ಮ (73) ಅವರನ್ನು ಕರೆದುಕೊಂಡು ದೇಶದ ಎಲ್ಲ ಕ್ಷೇತ್ರಗಳ ದರ್ಶನ ಮಾಡಿಸಿದ್ದಾರೆ. ಮಾತ್ರವಲ್ಲದೆ 4 ದೇಶಗಳನ್ನು ಕೂಡ ತೋರಿಸಿಕೊಂಡು ಬಂದಿದ್ದಾರೆ. ಇದೀಗ ಬೆಳಗಾವಿ ಮೂಲಕ ಗೋವಾಗೆ ಆಗಮಿಸಿ ನಂತರ ಅಲ್ಲಿಂದ ಕಾರವಾರ, ಗೋಕರ್ಣ ಮಾರ್ಗವಾಗಿ ಸಾಗುತ್ತಿದ್ದಾರೆ.

ಭೂತಾನ್, ಮೈನ್ಮಾರ್, ನೇಪಾಳ ಮಾತ್ರವಲ್ಲದೆ ಭಾರತದ ಕನ್ಯಾಕುಮಾರಿಯಿಂದ ಹಿಡಿದು ಕಾಶ್ಮೀರದವರೆಗೂ ಇದೇ ಹಳೆ ಸ್ಕೂಟರ್‌ನಲ್ಲಿ ಕೃಷ್ಣಕುಮಾರ್ ತಮ್ಮ ವೃದ್ಧ ತಾಯಿಯನ್ನು ಕೂರಿಸಿಕೊಂಡು ಎಲ್ಲ ತೀರ್ಥ ಕ್ಷೇತ್ರಗಳ ದರ್ಶನ ಮಾಡಿಸುತ್ತಿದ್ದಾರೆ. ಬ್ರಹ್ಮಚಾರಿಯಾಗಿಯೇ ಉಳಿದುಕೊಂಡು ಕೃಷ್ಣಕುಮಾರ್ ತಮ್ಮ ತಾಯಿಗೆ ದೇಶವನ್ನು ಸುತ್ತಿಸುವ ಸಂಕಲ್ಪ ಮಾಡಿದ್ದರು.

ಬಜಾಜ್ ಚೇತಕ್ ಸ್ಕೂಟರ್ ಅನ್ನು ಕೃಷ್ಣಕುಮಾರ್ ಅವರಿಗೆ ತಮ್ಮ ತಂದೆ ಕೊಡಿಸಿದ್ದರು. ಈ ಸ್ಕೂಟರ್ ಅನ್ನು ತಮ್ಮ ತಂದೆ ಎಂದು ಭಾವಿಸಿಕೊಂಡು ಅದರಲ್ಲಿಯೇ ತಾಯಿಯನ್ನು ತೀರ್ಥಯಾತ್ರೆಗೆ ಕರೆದುಕೊಂಡು ಹೋಗುತ್ತಿದ್ದಾರೆ. ಸ್ಕೂಟರ್‌ನಲ್ಲಿಯೇ ತಾಯಿಯನ್ನು ಕೂರಿಸಿಕೊಂಡು ದೇಶದ ಎಲ್ಲ ಕ್ಷೇತ್ರಗಳ ದರ್ಶನ ಮಾಡಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಅವರು, . ಇದುವರೆಗೂ ಸ್ಕೂಟರ್‌ನಲ್ಲಿಯೇ 78,162 ಕಿ.ಮೀ ಸುತ್ತಿ ತಾಯಿಯನ್ನು ಕರೆದುಕೊಂಡು ಇಡೀ ಭಾರತ ದರ್ಶನ ಮಾಡಿಸಿದ್ದೇನೆ ಎಂದು ತಿಳಿಸಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸೌರಾಷ್ಟ್ರದಿಂದ ಪರಶುರಾಮ ಕುಂಡದವರೆಗೆ ಹಾಗೂ ಇತರ 3 ದೇಶಗಳನ್ನು ಕೂಡ ಇದೇ ಸ್ಕೂಟರ್‌ನಲ್ಲಿ ಸುತ್ತಿ ಬಂದಿದ್ದೇವೆ. ಇದೀಗ ಗೋವಾಕ್ಕೆ ಬಂದು ತಲುಪಿದ್ದೇವೆ. ಗೋವಾದಲ್ಲಿ ಎಲ್ಲ ದೇವಸ್ಥಾನ ಹಾಗೂ ಪ್ರವಾಸಿ ತಾಣಗಳನ್ನು ತಾಯಿಗೆ ದರ್ಶನ ಮಾಡಿಸಿಕೊಂಡು ನಂತರ ಕರ್ನಾಟಕದ ಅಂಕೋಲಾ, ಗೋಕರ್ಣ, ಉಡುಪಿ, ಮಂಗಳೂರು ಮಾರ್ಗವಾಗಿ ಎಲ್ಲ ತೀರ್ಥ ಕ್ಷೇತ್ರಗಳಿಗೆ ಭೇಟಿ ನೀಡಿ ಬಳಿಕ ಮೈಸೂರಿಗೆ ತೆರಳುವ ಸಂಕಲ್ಪ ಮಾಡಿಕೊಂಡಿದ್ದೇವೆ ಎಂದಿದ್ದಾರೆ.

ಒಟ್ಟಿನಲ್ಲಿ ತಂದೆ-ತಾಯಿಯನ್ನು ಬೀದಿಯಲ್ಲಿ ಅನಾಥ ಮಾಡುವ ಮಕ್ಕಳೇ ಹೆಚ್ಚಿರುವಾಗ ರಾಮಾಯಣ ಕಾಲದ ಶ್ರವಣ ಕುಮಾರನಂತೆ ಈ ಆಧುನಿಕ ಶ್ರವಣ ಕುಮಾರ ತಾಯಿಯನ್ನು ಬೈಕ್‌ನಲ್ಲಿ ಕರೆದೊಯ್ದು ತೀರ್ಥ ಕ್ಷೇತ್ರ ದರ್ಶನ ಮಾಡಿಸುತ್ತಿರುವುದು ನಿಜವಾಗಿಯೂ ಶ್ಲಾಘನೀಯ.

- Advertisement -

Related news

error: Content is protected !!