Monday, June 8, 2026
spot_imgspot_img
spot_imgspot_img

ನೆಲ್ಯಾಡಿ: ಮರವೇರಿದ್ದ ಯುವಕ ಕಾಲುಜಾರಿ ಕೆಳಗೆ ಬಿದ್ದು ಮೃತ್ಯು.

- Advertisement -
- Advertisement -

ನೆಲ್ಯಾಡಿ:- ಮರದ ಗೆಲ್ಲು ಕಡಿಯಲು ಮರ ಹತ್ತಿದ ವೇಳೆ ಆಕಸ್ಮಿಕವಾಗಿ ಕೆಳಕ್ಕೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಗೋಳಿತ್ತೊಟ್ಟಿನಲ್ಲಿ ಸೆ.2ರಂದು ನಡೆದಿದೆ.

ಕೊಣಾಲು ಗ್ರಾಮದ ಕೋಲ್ಪೆ ದರ್ಖಾಸು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಇಸ್ಮಾಯಿಲ್(25)ಮೃತಪಟ್ಟಯುವಕ. ಇಸ್ಮಾಯಿಲ್‌ರವರು ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ಎಂಬಲ್ಲಿ ಮಾವಿನ ಮರವೊಂದರ ಗೆಲ್ಲು ಕಡಿಯಲು ಮರ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!