Tuesday, November 24, 2026
spot_imgspot_img
spot_imgspot_img

ನಿಂತಿದ್ದ ಶಾಲಾ ಬಸ್‌ಗೆ ಟ್ರಕ್‌ ಡಿಕ್ಕಿ – ನಾಲ್ವರು ಮಕ್ಕಳು ಸಾವು , 35 ಜನರಿಗೆ ಗಾಯ

- Advertisement -
- Advertisement -

ಲಕ್ನೋ: ವೇಗವಾಗಿ ಬಂದ ಟ್ರಕ್‌ವೊಂದು ನಿಂತಿದ್ದ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು, 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ನಡೆದಿದೆ. ಕನ್ನೌಜ್‌ನ ಥಾಥಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಭವಿಸಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಶಾಲಾ ಬಸ್‌ನಲ್ಲಿ ಸುಮಾರು 50 ಮಕ್ಕಳು ಮತ್ತು 6 ಶಿಕ್ಷಕರು ಇದ್ದರು. ಆಗ್ರಾದಿಂದ ಕೌಶಂಬಿಗೆ ಶಾಲಾ ಪ್ರವಾಸಕ್ಕೆ ಕರೆದೊಯ್ಯಲಾಗಿತ್ತು. ಪ್ರವಾಸ ಮುಗಿಸಿ ಹಿಂತಿರುಗುತ್ತಿದ್ದಾಗ, ಹಿಂದಿನಿಂದ ಅತಿ ವೇಗದಲ್ಲಿ ಬರುತ್ತಿದ್ದ ಟ್ರಕ್, ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಹಲವಾರು ಮಕ್ಕಳು ಗಾಯಗೊಂಡಿದ್ದು, ಸ್ಥಳದಲ್ಲಿ ಭೀತಿ ಉಂಟಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ಕೈಗೊಂಡು ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನ ಆಂಬುಲೆನ್ಸ್‌ ಮೂಲಕ ತಿರ್ವಾದ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು.

ಕನ್ನೌಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಶುತೋಷ್ ಮೋಹನ್ ಅಗ್ನಿಹೋತ್ರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಕೂಡ ಕಾಲೇಜು ಆಸ್ಪತ್ರೆಗೆ ಭೇಟಿ ನೀಡಿ, ಗಾಯಗೊಂಡ ಮಕ್ಕಳ ಆರೋಗ್ಯ ಸ್ಥಿತಿ ವಿಚಾರಿಸಿದ್ರು. ಘಟನೆ ಸಂಬಂಧ ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!