Friday, March 29, 2024
spot_imgspot_img
spot_imgspot_img

ಅಧಿಕಾರ ಹಸ್ತಾಂತರಕ್ಕೆ ಕೊನೆಗೂ ಒಪ್ಪಿಗೆ ಸೂಚಿಸಿದ ಟ್ರಂಪ್!!

- Advertisement -G L Acharya panikkar
- Advertisement -

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊನೆಗೂ ಅಧಿಕಾರ ಹಸ್ತಾಂತರಕ್ಕೆ ಸಮ್ಮತಿ ಸೂಚಿಸಿದ್ದಾರೆ. ಈ ಸಂಬಂಧ ಅಗತ್ಯ ಕ್ರಮ ತೆಗೆದುಕೊಳ್ಳುವಂತೆಯೂ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಧಿಕಾರ ಹಸ್ತಾಂತರ ನಡೆಯಲಿದೆ. ಏನಾಗಬೇಕೋ ಅದು ಆಗಲಿದೆ. ಆದರೆ ನಾನು ಚುನಾವಣೆಯಲ್ಲಿ ಸೋತಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.

ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಸಂಬಂಧ ಟ್ರಂಪ್ ಎತ್ತಿರುವ ತಕರಾರು ಅರ್ಜಿಯನ್ನು ಪರಿಗಣಿಸಲು ನ್ಯಾಯಾಲಯಗಳು ಹಿಂದೇಟು ಹಾಕಿವೆ. ಈ ಹಿನ್ನೆಲೆಯಲ್ಲಿ ಅಂತಿಮವಾಗಿ ಅಧಿಕಾರ ಹಸ್ತಾಂತರಕ್ಕೆ ಟ್ರಂಪ್ ಸಮ್ಮತಿ ಸೂಚಿಸಿದ್ದಾರೆ.

- Advertisement -

Related news

error: Content is protected !!