Thursday, April 25, 2024
spot_imgspot_img
spot_imgspot_img

#EducationInTulu ಅಭಿಯಾನಕ್ಕೆ ಜಗ್ಗೇಶ್ ಬೆಂಬಲ: ತುಳು ಭಾಷೆಯಲ್ಲಿ ಟ್ವೀಟ್ ಮಾಡಿದ ನಟ

- Advertisement -G L Acharya panikkar
- Advertisement -

ಮಂಗಳೂರು:  ಕರ್ನಾಟಕ ಮಾತ್ರವಲ್ಲದೇ ಹೊರರಾಜ್ಯ, ಹೊರ ದೇಶಗಳಲ್ಲಿಯೂ ತಮ್ಮ ನೆಲೆಯನ್ನು ಕಂಡುಕೊಂಡಿರುವ ತುಳುವರು ಅಲ್ಲೂ ತಮ್ಮ ತಾಯ್ನೆಲದ ಕಂಪನ್ನು ಸೂಸಿದ್ದಾರೆ. ಇದೀಗ ತುಳುನಾಡಿನ ಮಕ್ಕಳಿಗೆ ತುಳುವಿನಲ್ಲಿಯೇ ಶಿಕ್ಷಣ ಸಿಗಬೇಕು ಎಂಬ ಅಭಿಯಾನವೊಂದನ್ನು ನಡೆಸಲು ತುಳುವರು ತೀರ್ಮಾನಿಸಿದ್ದಾರೆ.ದ್ಯಕ್ಕೆ ಕೇಂದ್ರ ಸರಕಾರವು ಜಾರಿಗೆ ತರಲು ನಿರ್ಧರಿಸಿರುವ ಹೊಸ ಶಿಕ್ಷಣ ನೀತಿಯಲ್ಲಿ 5 ನೇ ತರಗತಿಯವರೆಗೆ ಮಾತೃ ಭಾಷೆಯಲ್ಲಿ ಅಥವಾ ಪ್ರಾದೇಶಿಕ ಭಾಷೆಯಲ್ಲಿ ವಿದ್ಯಾಭ್ಯಾಸ ಕೊಡಬೇಕೆಂಬ ನಿಯಮವಿದ್ದು.ತುಳು ಭಾಷೆಯಲ್ಲಿ ಶಿಕ್ಷಣ , ತುಳುನಾಡಿನ ಮಕ್ಕಳಿಗೆ ದೊರೆಯ ಬೇಕಾಗಿದೆ.

ನಟ ಜಗ್ಗೇಶ್ ಬೆಂಬಲ: ಕನ್ನಡದ ನವರಸ ನಾಯಕ ಜಗ್ಗೇಶ್ ಕೂಡಾ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು, ಟ್ವಿಟ್ ಮಾಡಿದ್ದಾರೆ. ನಾನು ಕೂಡಾ ನಿಮ್ಮೊಂದಿಗೆ ತುಳು ಭಾಷೆ ಅಭಿಯಾನಕ್ಕೆ ಬರುತ್ತೇನೆ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ತುಳು ಭಾಷಿಕ ವಿದ್ಯಾರ್ಥಿಗಳಿಗೆ ತುಳು ಭಾಷೆಯಲ್ಲಿಯೇ ಶಿಕ್ಷಣ ಸಿಗುವಂತಾಗಬೇಕು ಎಂದು ಅಭಿಯಾನ ಆರಂಭಿಸಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ಅನೇಕ ಮಂದಿ ಈಗಾಗಲೇ #EducationInTulu ಟ್ವೀಟ್ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.

- Advertisement -

Related news

error: Content is protected !!