Tuesday, May 7, 2024
spot_imgspot_img
spot_imgspot_img

ಪುತ್ತೂರು: ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ‘ತುಳುನಾಡ ಬಂಟೆರೆ ಪರ್ಬ-2023’ ಕಾರ್ಯಕ್ರಮ

- Advertisement -G L Acharya panikkar
- Advertisement -

ಪುತ್ತೂರು : ಯುವ ಬಂಟರ ಸಂಘ ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ಯುವ ಬಂಟರ ದಿನಾಚರಣೆಯ ಪ್ರಯುಕ್ತ ಜು.23 ರಂದು ‘ತುಳುನಾಡ ಬಂಟೆರೆ ಪರ್ಬ-2023’ ಕಾರ್ಯಕ್ರಮವು ಪುತ್ತೂರು ಕೊಂಬೆಟ್ಟು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ನಡೆಯಿತು.

ತುಳುನಾಡ ಬಂಟೆರೆ ಪರ್ಬ ಕಾರ್ಯಕ್ರಮವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್‌ ಕುಮಾರ್‌ ರೈ ಮಾಲಾಡಿ ದೀಪ ಬೆಳಗಿಸಿ ಉದ್ಘಾಟಿಸಿದರು. ವೇದಿಕೆಯಲ್ಲಿ ಪುತ್ತೂರು ಶಾಸಕ ಅಶೋಕ್‌ ಕುಮಾರ್‌ ರೈ, ಬಂಟರ ಸಂಘದ ಮಾಜಿ ಅಧ್ಯಕ್ಷ ಸವಣೂರು ಕೆ. ಸೀತಾರಾಮ ರೈ,ಅಬುದಾಭಿಯ ಉದ್ಯಮಿ ಮಿತ್ರಂಪಾಡಿಯ ಜಯರಾಮ ರೈ, ಮಾಜಿ ಸಚಿವ ರಮಾನಾಥ ರೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಮತ್ತು ಸುಮಾ ಅಶೋಕ್‌ ಕುಮಾರ್‌ ರೈ ದಂಪತಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮವು ಬಂಟರ ಯಾನೆ ನಾಡವರ ಮಾತೃಸಂಘ, ಪುತ್ತೂರು ತಾಲೂಕು ಸಮಿತಿ, ತಾಲೂಕು ಬಂಟರ, ಮಹಿಳಾ ಹಾಗೂ ವಿದ್ಯಾರ್ಥಿ ಬಂಟರ ಸಂಘದ ಸಹಕಾರದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಹಲವಾರು ಗಣ್ಯರು ಭಾಗವಹಿಸಿದರು.

ಬಂಟ ಸ್ಮತಿ ಕಾರ್ಯಕ್ರಮದಲ್ಲಿ ನಿರಂಜನ ರೈ ಮಠಂತಬೆಟ್ಟು, ಕೋಚಣ್ಣ ರೈ, ಡಾ.ತಿಮ್ಮಪ್ಪ ರೈ ಹಾಗೂ ಮುತ್ತಪ್ಪ ರೈಯವರ ಕುಟುಂಬಸ್ಥರರು ಉಪಸ್ಥಿತರಿದ್ದರು.

ಯುವ ಬಂಟರ ಸಂಘದಿಂದ ಮೂವರು ವಿದ್ಯಾರ್ಥಿನಿಯರ ಕಲಿಕೆಗೆ ಯುವ ಬಂಟರ ಸಂಘದಿಂದ ವಿದ್ಯಾನಿಧಿಯನ್ನು ವಿತರಿಸಲಾಯಿತು. ಪ್ರಶಸ್ತಿ ಪುರಸ್ಕೃತ ಕೃಷಿಕ ಕಡಮಜಲು ಸುಭಾಷ್ ರೈ, ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ರೈರವರು ಉಪಸ್ಥಿತರಿದ್ದರು.

ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಬಂಟರ ಸಂಘದ ಮಾಜಿ ಅಧ್ಯಕ್ಷ ನುಳಿಯಾಲು ಜಗನ್ನಾಥ ರೈ ಮಾದೋಡಿ, ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಂಟರ ಸಂಘದ ನಿರ್ದೇಶಕ ನುಳಿಯಾಲು ರವೀಂದ್ರ ಶೆಟ್ಟಿ, ಮುಂಬೈಯ ನಿವೃತ್ತ ಪೊಲೀಸ್ ಅಧಿಕಾರಿ ಪ್ರಕಾಶ್ ಭಂಡಾರಿ, ಜಯಕರ್ನಾಟಕ ಸಂಘಟನೆಯ ರಾಜ್ಯ ಮುಖಂಡ ಪ್ರಕಾಶ್ ರೈ ದೇರ್ಲ, ಯುವ ಬಂಟರ ಸಂಘದ ಮಾಜಿ ಅಧ್ಯಕ್ಷ ರಾಕೇಶ್ ರೈ ಕಡೆಂಜಿ, ಬಂಟರ ಯಾನ ನಾಡವರ ಮಾತೃ ಸಂಘದ ಉಪಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ, ಮಾತೃ ಸಂಘದ ತಾಲೂಕು ಸಂಚಾಲಕ ದಯಾನಂದ ರೈ ಮನವಳಿಕೆ, ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ರೈ ಡಿಂಬ್ರಿ, ಕೋಶಾಧಿಕಾರಿ ಕೃಷ್ಣಪ್ರಸಾದ್ ಆಳ್ವ, ಉಪಾಧ್ಯಕ್ಷ ಚಿಲ್ಮೆತ್ತಾರು ಜಗಜೀವನ್‌ದಾಸ್ ರೈ, ತಾಲೂಕು ಮಹಿಳಾ ಬಂಟರ ಸಂಘದ ಅಧ್ಯಕ್ಷ ಸಬಿತಾ ಭಂಡಾರಿ, ಮಾತೃ ಸಂಘದ ಸಹ ಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲುರವರುಗಳು ಉಪಸ್ಥಿತರಿದ್ದರು.

ಎನ್.ಮುತ್ತಪ್ಪ ರೈಯವರ ಸಹೋದರ ಉದ್ಯಮಿ ಕರುಣಾಕರ್ ರೈ ದೇರ್ಲ ಮತ್ತು ಮನೆಯವರು ಮಧ್ಯಾಹ್ನದ ಭೋಜನದ ವ್ಯವಸ್ಥೆಯ ಪ್ರಾಯೋಜಕತ್ವ ವಹಿಸಿದ್ದರು.

ಧ್ವಜಾರೋಹಣ ಕಾರ್ಯಕ್ರಮದಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮಾತೃ ಸಂಘದ ನಿರ್ದೇಶಕ ಪುರಂದರ ರೈ ಮಿತ್ರಂಪಾಡಿ, ಬಂಟರ ಸಂಘದ ಪ್ರಧಾನ ಕಾರ್‍ಯದರ್ಶಿ ರಮೇಶ್ ರೈ ಡಿಂಬಿ, ಕೋಶಾಧಿಕಾರಿ ಕೃಷ್ಣಪ್ರಸಾದ್‌ ಆಳ್ವ ಉಪ್ಪಳಿಗೆ, ಉಪಾಧ್ಯಕ್ಷ ರೋಶನ್ ರೈ ಬನ್ನೂರು ಮಾಜಿ ಅಧ್ಯಕ್ಷ ರವೀಂದ್ರ ನೆಕ್ಕಿಲು ಉಪಸ್ಥಿತರಿದ್ದರು.

ಹರ್ಷಕುಮಾರ್ ರೈ ಪ್ರಾಯೋಜಕತ್ವದ ಜನ್ಮ ಫೌಂಡೇಶನ್ ಪ್ರವೇಶ ದ್ವಾರದ ಉದ್ಘಾಟನೆ ಸಂದರ್ಭದಲ್ಲಿ ಬಂಟರ ಸಂಘದ ಗೌರವ ಸಲಹೆಗಾರರಾದ ಸಂಜೀವ ಆಳ್ವ ಹಾರಾಡಿ, ಬಂಟರ ಸಂಘದ ಉಪಾಧ್ಯಕ್ಷ ಜಗಜೀವನ್‌ದಾಸ್ ರೈ ಚಿಲ್ಮೆತ್ತಾರು, ಮಾತೃ ಸಂಘದ ನಿರ್ದೇಶಕ ಜೈರಾಜ್ ಭಂಡಾರಿ ನೊಣಾಲು ಉಪಸ್ಥಿತರಿದ್ದರು. ಕೋಡಿಂಬಾಡಿ ಗಿರಿಜಾ ಎಸ್ ರೈ ಪ್ರಾಯೋಜಕತ್ವದ ಪಿಜಿನಡ್ಕ ಗುತ್ತು ಸಂಜೀವ ರೈ ಪ್ರವೇಶ ದ್ವಾರ ಉದ್ಘಾಟನೆ ಸಂದರ್ಭದಲ್ಲಿ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್‌, ಬಂಟರ ಸಂಘದ ವಿಶೇಷ ಆಹ್ವಾನಿತರಾದ ಮಿತ್ತಳಿಕೆ ಸೂರ್‍ಯನಾಥ ಆಳ್ವ ಉಪಸ್ಥಿತರಿದ್ದರು.

ಡಿಂಬ್ರಿಗುತ್ತು ಸರಸ್ವತಿ ರೈ ಮತ್ತು ಮಿತ್ರಂಪಾಡಿ ಚೆನ್ನಪ್ಪ ರೈ ವೇದಿಕೆ ಉದ್ಘಾಟನೆ ಸಂದರ್ಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಮಿತಿ ಸಂಚಾಲಕ ದಯಾನಂದ ರೈ ಮನವಳಿಕೆಗುತ್ತು, ಬಂಟರ ಸಂಘದ ಮಾಜಿ ಅಧ್ಯಕ್ಷರುಗಳಾದ ಬೂಡಿಯಾರ್‌‌ ರಾಧಾಕೃಷ್ಣ ರೈ, ಅರಿಯಡ್ಕ ಲಕ್ಷ್ಮೀನಾರಾಯಣ ಶೆಟ್ಟಿ, ಅಬುದಾಬಿಯ ಉದ್ಯಮಿ ಮಿತ್ರಂಪಾಡಿ ಜಯರಾಮ ರೈ, ಮಾತೃ ಸಂಘದ ಸಹ ಸಂಚಾಲಕ ಜಯಪ್ರಕಾಶ್ ರೈ ನೂಜಿಬೈಲು, ಮಾತೃ ಸಂಘದ ನಿರ್ದೇಶಕ ನಿತ್ಯಾನಂದ ಶೆಟ್ಟಿ, ಮನವಳಿಕೆ, ಪುತ್ತೂರು ನಗರ ಬಂಟರ ಸಂಘದ ಅಧ್ಯಕ್ಷ ಶಿವರಾಮ ಆಳ್ವ ಬಳ್ಳಮಜಲುಗುತ್ತು ಉಪಸ್ಥಿತರಿದ್ದರು.

ಬೆಳಿಗ್ಗೆ ಗಣಪತಿ ಹವನ ಮತ್ತು ಸತ್ಯನಾರಾಯಣ ಪೂಜೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮವು ಬಳಿಕ ತುಳುನಾಡು,ಬಂಟ ಸಂಸ್ಕೃತಿಗಳನ್ನು ಬಿಂಬಿಸುವ ನಿಟ್ಟಿನಲ್ಲಿ ದ.ಕ, ಕಾಸರಗೋಡು, ಉಡುಪಿ ಜಿಲ್ಲಾ ವ್ಯಾಪ್ತಿಯ ಆಯ್ದ ಐದು ಬಂಟ ಕಲಾ ತಂಡಗಳಿಂದ ಸಾಂಸ್ಕೃತಿಕ ಸ್ಫರ್ಧೆ ತುಳುನಾಡ ಬಂಟೆರೆ ಪರ್ಬ-2023 ಹಾಗೂ ಬಂಟ ಸಮಾಜದ ಹಿರಿಯ ಚೇತನಗಳನ್ನು ಸ್ಮರಿಸುವ ಬಂಟ ಸ್ಮೃತಿ ಕಾರ್ಯಕ್ರಮ ನಡೆಯಿತು.

ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷ ಶಶಿರಾಜ್ ರೈ ಮುಂಡಾಳಗುತ್ತು ಸ್ವಾಗತಿಸಿ, ಕಾರ್ಯದರ್ಶಿ ರಂಜಿನಿ ಶೆಟ್ಟಿ, ಕೋಶಾಧಿಕಾರಿ ಅಶೋಕ್ ಶೆಟ್ಟಿ, ಉಪಾಧ್ಯಕ್ಷ ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಕಾರ್ಯಕ್ರಮದ ಸಂಚಾಲಕರುಗಳಾದ ಹರ್ಷ ಕುಮಾರ್ ರೈ ಮಾಡಾವು, ಭಾಗ್ಯೇಶ್ ರೈ ಕೆಯ್ಯೂರು, ಸಂಯೋಜಕ ರವಿಪ್ರಸಾದ್ ಶೆಟ್ಟಿ ಬನ್ನೂರು, ವಿದ್ಯಾರ್ಥಿ ಬಂಟರ ಸಂಘದ ಅಧ್ಯಕ್ಷ ಪವನ್ ಶೆಟ್ಟಿ ಉಪಸ್ಥಿತರಿದ್ದರು. ಕ್ರೀಡಾ ಸಂಚಾಲಕ ನವೀನ್ ರೈ ಪಂಜಳ ಮತ್ತು ಧಾರ್ಮಿಕ ಸಂಚಾಲಕ ಮನ್ಮಥ ಶೆಟ್ಟಿ ಕೊಡಿಪ್ಪಾಡಿ ಕಾರ್ಯಕ್ರಮ ನಿರೂಪಿಸಿದರು.

ಯುವ ಬಂಟರ ಸಂಘದ ನಿಕಟ ಪೂರ್ವಾಧ್ಯಕ್ಷ ಪ್ರಕಾಶ್ ರೈ ಸಾರಕರೆ, ಗೌತಮ್ ರೈ ಸಾಂತ್ಯ, ಸತೀಶ್ ಶೆಟ್ಟಿ ಉಪ್ಪಿನಂಗಡಿ, ಪ್ರಜನ್ ಶೆಟ್ಟಿ, ಕಂಬಳತಡ್ಡ, ಕೃಷ್ಣಪ್ರಸಾದ್ ರೈ ಕಣಿಯಾರು, ಸಂದೀಪ್ ರೈ ಚಿಲ್ಮೆತ್ತಾರು, ಸದಾಶಿವ ಶೆಟ್ಟಿ, ಮಾರಂಗ, ಯೋಗೀಶ್ ಸಾಮಾನಿ, ಕಾರ್ತಿಕ್ ರೈ, ರಂಜಿತಾ ಶೆಟ್ಟಿಕಾವು, ಯಶುಭ ರೈ, ಸ್ವಸ್ತಿಕ್ ಶೆಟ್ಟಿ ಸಹಿತ ಅನೇಕ ಮಂದಿ ವಿವಿಧ ಕಾರ್ಯಕ್ರಮದಲ್ಲಿ ಸಹಕರಿಸಿದರು.

- Advertisement -

Related news

error: Content is protected !!