- Advertisement -
- Advertisement -
ಬಂಟ್ವಾಳ, ಜು.2: ಇಬ್ಬರು ರೋಗಿಗಳಿಗೆ ಹಾಗೂ ಓರ್ವ ನರ್ಸ್ ಗೆ ಕೋವಿಡ್ – 19 (ಕೊರೋನ) ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತುಂಬೆಯ ಖಾಸಗಿ ಆಸ್ಪತ್ರೆಯೊಂದನ್ನು ಸೀಲ್ ಡೌನ್ ಮಾಡಲಾಗಿದೆ.ಕೆಲವು ದಿನಗಳ ಹಿಂದೆ ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾದ ಇಬ್ಬರು ರೋಗಿಗಳ ಗಂಟಲ ದ್ರವದ ಮಾದರಿಯನ್ನು ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಆ ಇಬ್ಬರು ರೋಗಿಗಳ ವರದಿಯೂ ಪಾಸಿಟಿವ್ ಬಂದಿದೆ. ಅಲ್ಲದೆ ಆಸ್ಪತ್ರೆಯ ನರ್ಸ್ ಒಬ್ಬರ ಕೋವಿಡ್ ಪರೀಕ್ಷೆಯ ವರದಿಯೂ ಪಾಸಿಟಿವ್ ಬಂದಿದ್ದು ಮೂವರನ್ನೂ ಮಂಗಳೂರು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಆಸ್ಪತ್ರೆಯನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದ್ದು ತುರ್ತು ಸೇವೆಯನ್ನು ಹೊರೆತು ಪಡಿಸಿ ಬಾಕಿ ಎಲ್ಲಾ ಹೊಸ ಹೊರ, ಒಳ ರೋಗಿಗಳ ಸೇವೆಯನ್ನು ನಿಲ್ಲಿಸಲಾಗಿದೆ. ಆಸ್ಪತ್ರೆಯಲ್ಲಿದ್ದ ಹೆಚ್ಚಿನ ರೋಗಿಗಳನ್ನು ಮಂಗಳೂರಿನ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಿದ್ದು ಉಳಿದ ರೋಗಿಗಳಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -