Wednesday, July 1, 2026
spot_imgspot_img
spot_imgspot_img

ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ಮೂವರ ದುರ್ಮರಣ; ಮಗು ಚಿಂತಾಜನಕ

- Advertisement -
- Advertisement -

ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಹಿಂಬದಿಯಿಂದ ಅತಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಮಗುವೊಂದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಕಡೆಯಿಂದ ಸಿರಾ ಕಡೆಗೆ ತೆರಳುತ್ತಿದ್ದ ಕಾರು ಕಟ್ಟಿಗೇನಹಳ್ಳಿ ಬಳಿ ರಸ್ತೆ ಬದಿಯಲ್ಲಿ ಲಾರಿ ಕೆಟ್ಟು ನಿಂತಿದ್ದ ಲಾರಿಗೆ ಗುದ್ದಿ ಅನಾಹುತ ಸಂಭವಿಸಿದೆ.

ಮೃತರನ್ನು ಬೆಂಗಳೂರಿನ ಅನ್ನಪೂರ್ಣ (55), ಅದಿತಿ (32) ಹಾಗೂ ಆರತಿ (28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು, ಮತ್ತೊಬ್ಬರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ. ಗಾಯಗೊಂಡಿರುವ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

ಪುಣೆ ಕಡೆಗೆ ತೆರಳುತ್ತಿದ್ದ ಲಾರಿ ನಿಂತಿರುವುದನ್ನು ಗಮನಿಸದ ಕಾರು ಚಾಲಕ ಹಿಂಭಾಗಕ್ಕೆ ಡಿಕ್ಕಿ ಹೊಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಕೋರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!