- Advertisement -
- Advertisement -



ತುಮಕೂರು ಜಿಲ್ಲೆಯಲ್ಲಿ ರಸ್ತೆ ದಾಟುತ್ತಿದ್ದ ಕೋತಿಯನ್ನು ರಕ್ಷಿಸಲು ಪ್ರಯತ್ನಿಸಿದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿ, ಚಾಲಕರೊಬ್ಬರು ಸಾವನ್ನಪ್ಪಿದ ದುರ್ಘಟನೆ ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಬಳಿ ನಡೆದಿದೆ.
ಸೋಂಪುರ ನಿವಾಸಿ ಮಹೇಂದ್ರಕುಮಾರ್ ಅವರು ಕೊರಟಗೆರೆಯಿಂದ ತುಮಕೂರು ಕಡೆಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಜಂಪೇನಹಳ್ಳಿ ಸಮೀಪ ಏಕಾಏಕಿ ಕೋತಿಯೊಂದು ರಸ್ತೆ ದಾಟಲು ಮುಂದಾಗಿದೆ. ಕೋತಿಯನ್ನು ರಕ್ಷಿಸಲು ಚಾಲಕ ಮಹೇಂದ್ರಕುಮಾರ್ ತಕ್ಷಣ ಬ್ರೇಕ್ ಹಾಕಿದ ಪರಿಣಾಮ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಅದೇ ಸಮಯದಲ್ಲಿ ತುಮಕೂರು ಕಡೆಯಿಂದ ಬರುತ್ತಿದ್ದ ಇನ್ನೋವಾ ಕಾರು ಪಲ್ಟಿಯಾದ ಆಟೋಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಮಹೇಂದ್ರಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ
- Advertisement -








