Saturday, July 25, 2026
spot_imgspot_img
spot_imgspot_img

ತುಮಕೂರು: ಡಿವೈಡರ್‌ಗೆ ಗುದ್ದಿದ ಕಾರು, ಸಂಪೂರ್ಣ ಭಸ್ಮ!

- Advertisement -
- Advertisement -

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ಕಾಣಿಸಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಭೀಕರ ಘಟನೆ ಗುಬ್ಬಿ ತಾಲೂಕಿನ ರಾ.ಹೆ 206ರಲ್ಲಿ ನಿನ್ನೆ (ಜ.5) ಸಂಜೆ ನಡೆದಿದೆ.

ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಕಾರು ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಬೆಂಕಿ ಹತ್ತಿಕೊಳ್ಳುವ ಮೊದಲೇ ಹೊರಬಂದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಾಹಿತಿ ಪಡೆದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಗುಬ್ಬಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!