Wednesday, July 22, 2026
spot_imgspot_img
spot_imgspot_img

ತುಮಕೂರು: ವಿದ್ಯುತ್​​ ಶಾಕ್​​ ತಗುಲಿ ವ್ಯಕ್ತಿ ಸಾವು; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

- Advertisement -
- Advertisement -

ತುಮಕೂರು: ವಿದ್ಯುತ್ ಪರಿವರ್ತಕ ಅಳವಡಿಸುವಾಗ ತಂತಿ​ ತಗುಲಿ ವ್ಯಕ್ತಿಯೊಬ್ಬರು​​ ಮೃತಪಟ್ಟಿರುವ ಘಟನೆ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ನಡೆದಿದೆ.

ಕೆ.ಪಿ. ಮನು (26) ಮೃತ ದುರ್ದೈವಿಯಾಗಿದ್ದು, ಈತನ ಪತ್ನಿ 9 ತಿಂಗಳ ತುಂಬು ಗರ್ಭಿಣಿ ಎನ್ನಲಾಗಿದೆ. ಟಿಸಿ ಬದಲಾಯಿಸುವ ವೇಳೆ ಬೆಸ್ಕಾಂ ಅಧಿಕಾರಿಗಳು ಲೈನ್ ಕ್ಲಿಯರೆನ್ಸ್ ನೀಡದೆ ಸಿಬ್ಬಂದಿಯನ್ನು ಕೆಲಸಕ್ಕೆ ನಿಯೋಜಿಸಿದ್ದ ಆರೋಪ ಕೇಳಿಬಂದಿದ್ದು, ಲೈನ್​​ಮ್ಯಾನ್​​ ಸಾವಿಗೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಮತ್ತು ಕುಟುಂಬಸ್ಥರು ಪ್ರತಿಭಟನೆ ನಡೆಸಿದ್ದಾರೆ.

ಘಟನೆ ಸಂಬಂಧ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ​ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಲಾಗಿದೆ. ಘಟನೆ ಬಗ್ಗೆ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!