Thursday, April 25, 2024
spot_imgspot_img
spot_imgspot_img

ಚುನಾವಣಾಧಿಕಾರಿಗಳಿಗೆ ಸಾಥ್ ನೀಡಿದ ಒಂಟಿ ಸಲಗ!!

- Advertisement -G L Acharya panikkar
- Advertisement -

ಬೆಳ್ತಂಗಡಿ ತಾಲೂಕು ಕೇಂದ್ರದಿಂದ 35 ಕಿಮೀ ದೂರದಲ್ಲಿರುವ ಬಾಂಜಾರುಮಲೆ ಪ್ರದೇಶವು ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುತ್ತಿದ್ದು, ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ‌ಚಾರ್ಮಾಡಿ ಘಾಟಿಯ 9ನೇ ತಿರುವಿನಿಂದ ಸುಮಾರು 15 ಕಿ.ಮೀ. ಒಳ ಭಾಗದಲ್ಲಿದೆ. ಕಾಡಿನಿಂದ ಆವೃತ್ತವಾಗಿರುವಈ ಪ್ರದೇಶದಲ್ಲಿ ಸುಮಾರು 45 ಮನೆಗಳ 260 ರಷ್ಟು ಮತದಾರರಿದ್ದಾರೆ. ಈ ಮತದಾರರಿಗೆ  ಬಾಂಜಾರುಮಲೆ ಸಮುದಾಯಭವನದಲ್ಲಿ ಮತಗಟ್ಟೆ ಸಂಖ್ಯೆ 86ರಲ್ಲಿ ಅವಕಾಶಮಾಡಿಕೊಡಲಾಗುತ್ತದೆ.

ಇದರ ಪರಿಶೀಲನೆಗಾಗಿ ಚುನಾವಣಾಧಿಕಾರಿ ರಘು, ಸಹಾಯಕ ಚುನಾವಣಾಧಿಕಾರಿ ಅಜಿತ್, ನೆರಿಯ ಗ್ರಾ.ಪಂ. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಹಾಗೂ ಸಿಬಂದಿಗಳು ಬಾಡಿಗೆ ವಾಹನ ಮೂಲಕ ತೆರಳಿದ್ದರು. ಮಧ್ಯಾಹ್ನ 1:35 ಕ್ಕೆ ಹೊರಟು ವಾಪಾಸಾಗುತ್ತಿದ್ದಾಗ, ಏನೆಪೋಯ ವಿದ್ಯುತ್ ಘಟಕದ ಡ್ಯಾಂ ಬಳಿ ಒಂಟಿ ಸಲಗ ಎದುರಾಗಿದೆ.

ಒಂಟಿ ಸಲಗ ಕಂಡು ಸಮೀಪದ ಕಿರು ರಸ್ತೆಯಲ್ಲಿ ಚಾಲಕ ವಾಹನನ್ನು ತಿರುವು ಹಾಕಿದ್ದರು. ಸುಮಾರು 2:15ರಿಂದ 3:15 ರವರೆಗೆ ಆನೆ ಹಾದುಹೋಗುವವರೆಗೆ ಸ್ಥಳದಲ್ಲೇ ಅಧಿಕಾರಿಗಳು ಉಳಿಯುವಂತಾಗಿತ್ತು. 

ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯವಾಗಿದ್ದು, ಆನೆಗಳ ಜೊತೆಗೇ ಇಲ್ಲಿನ ಜನರು ಜೀವನ ಸಾಗಿಸುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲದೆ ದಟ್ಟ ಕಾನನದ ನಡುವೆ ಜಲ ವಿದ್ಯುತ್ ಘಟಕಗಳಂತಹ ಯೋಜನೆಗಳಿಂದ ಕಾಡುಪ್ರಾಣಿಗಳಿಗೆ ತೊಂದರೆ ಆಗುತ್ತಿದೆ.

ಡ್ಯಾಂಗಳನ್ನು ನಿರ್ಮಿಸುತ್ತಿರುವುದರಿಂದ ಆನೆಗಳಿಗೆ ನೀರಿನ ಸಮಸ್ಯೆಯಾಗಿ ಜನವಸತಿ ಪ್ರದೇಶಗಳ ಕಡೆಗೆ ಬರುತ್ತಿರುವುದು ಹೆಚ್ಚಾಗುತ್ತಿದೆ. ಕಾಡಾನೆಗಳ ಹಾವಳಿ ಬಗ್ಗೆ ಕೇವಲ ಗ್ರಾಮಸ್ಥರಿಂದ ಮನವಿ ಸ್ವೀಕರಿಸಿದ್ದ ಅಧಿಕಾರಿಗಳಿಗೆ ಒಂಟಿ ಸಲಗ ತನ್ನ ಇರುವಿಕೆಯನ್ನು ಅವರ ಮುಂದೆಯೇ ಖಚಿತಪಡಿಸಿದೆ.

- Advertisement -

Related news

error: Content is protected !!