
ವಿಟ್ಲ: ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಕೋಟೆ ಪ್ರದೇಶದಲ್ಲಿ ಪರವಾನಿಗೆಯ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸಲಾಗುತ್ತಿರುವ ಬಗ್ಗೆ ದೊರೆತ ಮಾಹಿತಿಯ ಮೇರೆಗೆ ವಿಟ್ಲ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ದಿನಾಂಕ 14-05-2026ರಂದು ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಗಣಿಗಾರಿಕೆಗೆ ಸಂಬಂಧಿಸಿದ ದಾಖಲೆಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮೂಲಕ ಪರಿಶೀಲಿಸಲಾಯಿತು.




ಈ ವೇಳೆ ಕೆಂಪುಕಲ್ಲು ಗಣಿಗಾರಿಕೆ ಪರವಾನಿಗೆಯ ಅವಧಿ 29-04-2026ರಂದು ಮುಕ್ತಾಯಗೊಂಡಿರುವುದು ದೃಢಪಟ್ಟಿದೆ.ಆದರೆ, ಪರವಾನಿಗೆ ಪತ್ರದಲ್ಲಿ ನಮೂದಿಸಲಾಗಿದ್ದ ದಿನಾಂಕವನ್ನು 29-05-2026 ಎಂದು ತಿದ್ದುಪಡಿ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಬಂಟ್ವಾಳ ಮೇರಮಜಲು ನಿವಾಸಿ ರಂಜೀತ್ ಕುಮಾರ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ.110/2026ರಡಿ BNS 2023ರ ಕಲಂ 318(4), 336(3), MMDR Act 1957ರ ಕಲಂ 4(1), 4(1A), 21 ಹಾಗೂ KMMC Rule 1994ರ ಕಲಂ 3, 44ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.









