Tuesday, April 30, 2024
spot_imgspot_img
spot_imgspot_img

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾವು..!

- Advertisement -G L Acharya panikkar
- Advertisement -

ಐಸ್‌ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಮಕ್ಕಳು ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಎಂದು ಗುರುತಿಸಲಾಗಿದೆ.

ನಿನ್ನೆ ಮಧ್ಯಾಹ್ನ ಮಕ್ಕಳಿಗೆ ತಾಯಿ ಐಸ್‌ಕ್ರೀಂ ತಿನ್ನಿಸಿದ್ದರು. ತಳ್ಳುವ ಗಾಡಿಯಾತನಿಂದ ಐಸ್‌ಕ್ರೀಂ ಕೊಡಿಸಿದ್ದರು. ಆನಂತರ ಮಕ್ಕಳು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಬೇರೆ ಮಕ್ಕಳು ಕೂಡ ಐಸ್‌ಕ್ರೀಂ ‌ತಿಂದಿದ್ದರು. ಐಸ್‌ಕ್ರೀಂ ತಿಂದ ಬೇರೆ ಯಾರಿಗೂ ತೊಂದರೆ ಆಗಿಲ್ಲ. ಅವಳಿ ಮಕ್ಕಳ ಸಾವಿಗೆ ಇದುವರೆಗೂ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ನಂತರ ನಿಖರ ಕಾರಣ ತಿಳಿಯಲಿದೆ. ಮಿಮ್ಸ್ ಆಸ್ಪತ್ರೆಗೆ ಶವಗಳನ್ನು ರವಾನಿಸಲಾಗಿದೆ. ಅರಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!