Monday, April 29, 2024
spot_imgspot_img
spot_imgspot_img

ಮಂಗಳೂರು: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಪರವಾನಿಗೆ ರಹಿತ ಪಿಸ್ತೂಲು ಹೊಂದಿದ್ದ ಇಬ್ಬರ ಬಂಧನ

- Advertisement -G L Acharya panikkar
- Advertisement -
vtv vitla

ಮಂಗಳೂರು: ಅಕ್ರಮವಾಗಿ ಪಿಸ್ತೂಲ್ ಅನ್ನು ವಶದಲ್ಲಿರಿಸಿಕೊಂಡ ಆರೋಪದ ಮೇಲೆ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ಬಾಸ್ @ ಬೆಡಿ ಅಬ್ಬಾಸ್ (61), ಯಶವಂತ್ ಕುಮಾರ್ (45) ಎಂದು ಗುರುತಿಸಲಾಗಿದೆ.

ಬಜಪೆ ಗ್ರಾಮದ ಒಡ್ಡಿದಕಲ ಎಂಬಲ್ಲಿ ಇಬ್ಬರು ವ್ಯಕ್ತಿಗಳು ಬೈಕ್ ವೊಂದರಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮಾರಕಾಯುಧವಾದ ಪಿಸ್ತೂಲ್ ನ್ನು ವಶದಲ್ಲಿರಿಸಿಕೊಂಡು ತಿರುಗಾಡುತ್ತಿದ್ದರೆಂದು ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಇನ್ನು ಬಂಧಿತರಿಂದ ಪಿಸ್ತೂಲ್-1, ಮೊಬೈಲ್ ಫೋನುಗಳು-2, ಹಾಗೂ ಹೀರೋ ಹೊಂಡಾ ಫ್ಯಾಶನ್ ಪ್ಲಸ್ ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 1,45,000 ಆಗಬಹುದು ಎಂದು ಅಂದಾಜಿಸಲಾಗಿದ್ದು,ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಯ ಪೈಕಿ ಅಬ್ಬಾಸ್ ಎಂಬಾತನ ವಿರುದ್ಧ ಈ ಹಿಂದೆ ಕೇರಳದ ಕಾಸರಗೋಡು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಹಾಗೂ ಅಬಕಾರಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನೋರ್ವ ಆರೋಪಿ ಯಶವಂತ ಕುಮಾರ್ ಎಂಬಾತನ ವಿರುದ್ಧ ಈ ಹಿಂದೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾಸರಗೋಡು ಜಿಲ್ಲೆಯ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕುಂಬಳೆ ಪೊಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆ ಪ್ರಕರಣ ಹಾಗೂ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣವೊಂದು ದಾಖಲಾಗಿದೆ.

ಈ ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ, ಎಎಸ್ಐ ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

- Advertisement -

Related news

error: Content is protected !!