Tuesday, April 30, 2024
spot_imgspot_img
spot_imgspot_img

ಸಿಡಿಲು ಬಡಿದು ಸಹೋದರರಿಬ್ಬರು ಮೃತ್ಯು..!

- Advertisement -G L Acharya panikkar
- Advertisement -

ಸಿಡಿಲು ಬಡಿದು ಗದ್ದೆಗೆ ತೆರಳಿದ್ದ ಸಹೋದರರಿಬ್ಬರು ಸಾವಿಗೀಡಾದ ಘಟನೆ ಶಿವಮೊಗ್ಗದ ಭದ್ರಾವತಿಯ ಹುಣಸೆಕಟ್ಟೆ ಜಂಕ್ಷನ್‍ನಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ಬೀರು (32) ಹಾಗೂ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ಮಂಗಳವಾರ ರಾತ್ರಿ, ಕಟಾವಾಗಿದ್ದ ಭತ್ತದ ಗದ್ದೆಗೆ ಭತ್ತ ಕಾಯಲು ತೆರಳಿದ್ದರು. ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರ ಶವವನ್ನು ಭದ್ರಾವತಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಆಸ್ಪತ್ರೆಯ ಮುಂಭಾಗ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!