- Advertisement -
- Advertisement -
ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಘಟನೆ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ.
ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲೆ ಬಾಲಕಿಯರು ಮೃತಪಟ್ಟಿದ್ದಾರೆ. ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -