Saturday, May 18, 2024
spot_imgspot_img
spot_imgspot_img

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತ್ಯು

- Advertisement -G L Acharya panikkar
- Advertisement -

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ನಾವೂರ ಎಂಬಲ್ಲಿ ಇಂದು ಸಂಜೆ ನಡೆದಿದೆ.

ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 ) ಮೃತರಾದ ಬಾಲಕಿಯರು.

ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಉಳ್ಳಾಲದಲ್ಲಿ ವಾಸ್ತವ್ಯ ಹೂಡಿದ್ದು, ಇವತ್ತು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ಮಕ್ಕಳು ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಈ ವೇಳೆ ಮಕ್ಕಳು ನೀರಿನಲ್ಲಿ ಆಟ ಆಡುತ್ತಾ ಇದ್ದು, ಮನೆಯವರ ಮುಂದೆಯೇ ಈ ಎರಡು ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ. ನೀರಿನಲ್ಲಿ ಮುಳುಗುವುದನ್ನು ಕಣ್ಣಾರೆ ಕಂಡರೂ ಈಜು ಬಾರದ ಕಾರಣ ಮಕ್ಕಳನ್ನು ರಕ್ಷಣೆ ಮಾಡಲು ಮನೆಯವರಿಗೆ ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!