Sunday, September 27, 2026
spot_imgspot_img
spot_imgspot_img

ಮುಂಬೈನಿಂದ ಬಂದಿದ್ದ ಇಬ್ಬರು ಬಾಲಕಿಯರು ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತ್ಯು

- Advertisement -
- Advertisement -

ಈಜಲು ತೆರಳಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್‌ನಲ್ಲಿ ನಡೆದಿದೆ.

ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್ (17) ಹಾಗೂ ಜೋಯ ಪಾಟೀಲ್(14) ಘಟನೆಯಲ್ಲಿ ಮೃತಪಟ್ಟಿದ್ದಾರೆ.

ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಬಾಲಕಿಯರು ಗೌರಿಬಿದನೂರು ನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇನ್ನೆರಡು ದಿನಗಳ ನಂತರ ಮುಂಬೈಗೆ ವಾಪಸ್ ಹೊರಡಲಿದ್ದು, ದಂಡಿಗಾನಹಳ್ಳಿ ಜಲಾಶಯವನ್ನು ಕಣ್ತುಂಬಿಕೊಳ್ಳಬೇಕು ಎಂದು ಜಲಾಶಯಕ್ಕೆ ಹೋದವರು ಜಲಾಶಯದ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳೀಯರು ಇಬ್ಬರ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಮೃತರ ಸಂಬಂಧಿಕರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಿಸದೆ ಮನೆಗೆ ತೆಗೆದುಕೊಂಡು ಹೋಗಿದ್ದರು. ಕೊನೆಗೆ ಪೊಲೀಸರು ಮನೆಗೆ ತೆರಳಿ ಸಂಬಂಧಿಕರ ಮನವೊಲಿಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೆರಡು ದಿನಗಳಲ್ಲಿ ಜೀವಂತವಾಗಿ ಮುಂಬೈಗೆ ತೆರಳಬೇಕಿದ್ದ ಇಬ್ಬರು ಬಾಲಕಿಯರು ಸದ್ಯ ಶವವಾಗಿ ಮುಂಬೈಗೆ ತೆರಳಿದ್ದು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

Related news

error: Content is protected !!