- Advertisement -
- Advertisement -




ನೆಲಮಂಗಲ: ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ಮೃತಪಟ್ಟವರನ್ನು ಶಿವಲಿಂಗ ಗೌಡ(60), ಪ್ರಮೀಳಾ (55) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಕಾರಿನಲ್ಲಿ ಕುಟುಂಬ ಸದಸ್ಯರು ಬೆಂಗಳೂರಿನ ನಾರಾಯಣ ಆಸ್ಪತ್ರೆಗೆ ಬರುತ್ತಿದ್ದರು. ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನೀಡಿದ್ದಾರೆ.
- Advertisement -








