- Advertisement -
- Advertisement -





ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ಹಲವಾರು ಭಾಗಗಳಲ್ಲಿ ಬುಧವಾರ(ಮಾ.18) ಭಾರೀ ಮಳೆಯಾಗಿದ್ದು, ಬೆಂಗಳೂರಿನ ಎಂ.ಜಿ ರಸ್ತೆ, ಕಲ್ಯಾಣ್ ನಗರ, ಬಳ್ಳಾರಿ ರಸ್ತೆ, ಜಯನಗರ, ಬನಶಂಕರಿ, ಮೆಜೆಸ್ಟಿಕ್, ಶಾಂತಿನಗರ ಮತ್ತು ಕೋರಮಂಗಲದಂತಹ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








