Friday, October 23, 2026
spot_imgspot_img
spot_imgspot_img

ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ – 10 ಜನರ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಂಗಳೂರು: ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ ಮಾಡಿದ್ದ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶಾಹಿದ್ (19) ಹಲ್ಲೆಗೊಳಗಾದ ಯುವಕ.

ವಾಹನಕ್ಕೆ ಅಡ್ಡ ಬಂದ ಎಂದು ಶಾಹೀದ್ ಹಾಗೂ ಫರ್ದೀನ್ ಪಾಷಾ ಎಂಬ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಇದೇ ವೇಳೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಜಗಳವಾಡುತ್ತಿದ್ದ ಇಬ್ಬರನ್ನು ಕಳ್ಳರು ಎಂದು ಬಿಂಬಿಸಿದ್ದ. ಕೂಡಲೇ ಅಲ್ಲಿದ್ದ ಸ್ಥಳೀಯರು ಇಬ್ಬರನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ.

ಶಾಹೀದ್ ಮೇಲೆ ಗಂಭೀರ ಹಲ್ಲೆ ನಡೆಸಿ, ಸ್ಥಳೀಯರು ಆತನ ಮೊಬೈಲ್ ಅನ್ನು ಕೂಡ ಒಡೆದು ಹಾಕಿದ್ದಾರೆ. ಸದ್ಯ ಈ ಸಂಬಂಧ ಶಾಹೀದ್ ದೂರು ದಾಖಲಿಸಿದ್ದು, ಆರೋಪಿಗಳ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!