- Advertisement -
- Advertisement -


ಬಂಟ್ವಾಳ: ಖಾಸಗಿ ಬಸ್ ಗಳೆರಡು ಡಿಕ್ಕಿಯಾಗಿ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯವಿಲ್ಲದೆ ಪಾರಾದ ಘಟನೆ ತುಂಬೆ ತಿರುವಿನಲ್ಲಿ ನಡೆದಿದೆ.
ಮಂಗಳೂರು ಕಡೆಯಿಂದ ಬರುತ್ತಿದ್ದ ಎರಡು ಖಾಸಗಿ ಬಸ್ ಗಳು ಪರಸ್ಪರ ಡಿಕ್ಕಿಯಾಗಿದೆ. ಮಂಗಳೂರಿನಿಂದ ಉಪ್ಪಿನಂಗಡಿಗೆ ಹೋಗುವ ಅರಫಾ ಬಸ್ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಸೇಫ್ ವೇ ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.
ತುಂಬೆ ಅಪಾಯಕಾರಿ ತಿರುವಿನಿಂದ ಸ್ವಲ್ಪ ದೂರದಲ್ಲಿ ಈ ಅಪಘಾತ ಸಂಭವಿಸಿದ್ದು, ಎರಡು ಬಸ್ ಗಳ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
- Advertisement -