Thursday, November 12, 2026
spot_imgspot_img
spot_imgspot_img

ಕಿಶ್ತ್ವಾರ್‌ನಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ನಾಪತ್ತೆ: ಕುಲ್ಗಾಮ್‌ನಲ್ಲಿ CRPF ಚೆಕ್‌ಪೋಸ್ಟ್ ಮೇಲೆ ಉಗ್ರರ ದಾಳಿ, 3 ಯೋಧರಿಗೆ ಗಾಯ

- Advertisement -
- Advertisement -

ಶ್ರೀನಗರ: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ನಾಪತ್ತೆಯಾಗಿದ್ದು, ಅವರ ಪತ್ತೆಗಾಗಿ ಭದ್ರತಾ ಪಡೆಗಳು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಈ ಸಂದಿಗ್ಧ ಪರಿಸ್ಥಿತಿ ನಡುವೆ ಕುಲ್ಗಾಮ್ ಜಿಲ್ಲೆಯಲ್ಲಿ CRPF ಚೆಕ್‌ಪೋಸ್ಟ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಮೂವರು CRPF ಸಿಬ್ಬಂದಿ ಗಾಯಗೊಂಡಿದ್ದಾರೆ.

ಕಿಶ್ತ್ವಾರ್ ಜಿಲ್ಲೆಯಲ್ಲಿ ನಾಪತ್ತೆಯಾಗಿರುವ ವಿಶೇಷ ಪೊಲೀಸ್ ಅಧಿಕಾರಿಗಳನ್ನ ಬಾಬಿ ಚಂದ್(57) ಮತ್ತು ರಶ್‌ಪಾಲ್ ಕುಮಾರ್(45) ಎಂದು ಗುರುತಿಸಲಾಗಿದೆ. ಇಬ್ಬರೂ ಸ್ಥಳೀಯ ಪೊಲೀಸರ ವಿಶೇಷ ಕಾರ್ಯಾಚರಣೆ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕಿಯಾರ್ ಶಿಬಿರದಿಂದ ಧರ್ನಾ-ಮರ್ವಾ ಪ್ರದೇಶದಲ್ಲಿರುವ ಸೇನಾ ಶಿಬಿರಕ್ಕೆ ತೆರಳುತ್ತಿದ್ದ ವೇಳೆ ಇಬ್ಬರೂ ನಾಪತ್ತೆಯಾಗಿದ್ದಾರೆ.

ಆರಂಭದಲ್ಲಿ ಅವರ ಮೊಬೈಲ್ ಫೋನ್‌ಗಳು ಸಂಪರ್ಕಕ್ಕೆ ಸಿಕ್ಕಿದ್ದರೂ, ಬಳಿಕ ಸ್ವಿಚ್ ಆಫ್ ಆಗಿವೆ ಎಂದು ತಿಳಿದುಬಂದಿದೆ. ಇನ್ನೂ, ಸ್ಥಳೀಯರು ಗುಂಡಿನ ಸದ್ದು ಕೇಳಿರುವುದಾಗಿ ವರದಿಯಾಗಿದ್ದು, ನಾಪತ್ತೆಯ ಹಿಂದೆ ಉಗ್ರರ ಕೈವಾಡವಿದೆಯೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಈ ಬಗ್ಗೆ ಅಧಿಕೃತವಾಗಿ ಯಾವುದೇ ದೃಢೀಕರಣ ಲಭ್ಯವಾಗಿಲ್ಲ.

ನಾಪತ್ತೆಯಾದ ಅಧಿಕಾರಿಗಳ ಪತ್ತೆಗಾಗಿ ಪೊಲೀಸರು, ಸೇನೆಯ ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್‌ಪಿಎಫ್ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ. ಗುಡ್ಡಗಾಡು ಪ್ರದೇಶಗಳು ಹಾಗೂ ದಟ್ಟ ಅರಣ್ಯಗಳಲ್ಲಿ ತೀವ್ರ ಶೋಧ ಮುಂದುವರಿದಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!