- Advertisement -
- Advertisement -
ಶ್ರೀನಗರ: ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಪ್ರದೇಶದಲ್ಲಿ ನಡೆದಿದೆ.
ಉಗ್ರರು ಸೂಪೋರ್ ಪ್ರದೇಶದಲ್ಲಿ ಅಡಗಿರುವ ಖಚಿತ ಮಾಹಿತಿಯ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ. ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರು ಸೇನೆಯ ಗುಂಡಿಗೆ ಬಲಿಯಾಗಿದ್ದಾರೆ.
ಈ ಭಾಗದಲ್ಲಿ ಸೇನೆ ಗುರುವಾರ ರಾತ್ರಿಯಿಂದ ಕಾರ್ಯಾಚರಣೆ ಪ್ರಾರಂಭಿಸಿತ್ತು. ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹತ್ಯೆಗೀಡಾದ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ಭದ್ರತಾ ಪಡೆಗಳು ವಶಕ್ಕೆ ಪಡೆದಿದೆ.
- Advertisement -