Saturday, June 28, 2025
spot_imgspot_img
spot_imgspot_img

ವಿದ್ಯುತ್ ಕಂಬ ಬಿದ್ದು ಇಬ್ಬರು ಮಹಿಳೆಯರು ಸಾವು..!

- Advertisement -
- Advertisement -

ಬೆಂಗಳೂರು: ರಸ್ತೆ ಕಾಮಗಾರಿ ವೇಳೆ ವಿದ್ಯುತ್ ಕಂಬಕ್ಕೆ ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಯ್ಯಪ್ಪನಹಳ್ಳಿ ಬಳಿಯ ಸದ್ದುಗುಂಟೆಪಾಳ್ಯದಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯರನ್ನು ಸದ್ದುಗುಂಟೆಪಾಳ್ಯ ನಿವಾಸಿಗಳಾದ ಸುಮತಿ(35) ಮತ್ತು ಸೋನಿ ಕುಮಾರಿ (35) ಎಂದು ಗುರುತಿಸಲಾಗಿದೆ.

ಸದ್ದುಗುಂಟೆಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಜೆಸಿಬಿಯನ್ನು ಜಪ್ತಿ ಮಾಡಿ, ಜೆಸಿಬಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ. ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!