Tuesday, April 30, 2024
spot_imgspot_img
spot_imgspot_img

ಮಣಿಪುರದಲ್ಲಿ ಪೈಶಾಚಿಕ ಕೃತ್ಯ; ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ, ಸಾಮೂಹಿಕ ಅತ್ಯಾಚಾರ ಆರೋಪ

- Advertisement -G L Acharya panikkar
- Advertisement -

ಮಣಿಪುರದಲ್ಲಿಇಬ್ಬರು ಮಹಿಳೆಯರನ್ನು ಕಿಡಿಗೇಡಿಗಳ ಗುಂಪು ಬೆತ್ತಲೆ ಮೆರವಣಿಗೆ ಮಾಡಿಸಿದ್ದಾರೆ. ಬಳಿಕ ಅತ್ಯಾಚಾರ ಎಸಗಿದ್ದಾರೆ ಎಂದು ಬುಡಕಟ್ಟು ಸಮುದಾಯ ಆರೋಪ ಮಾಡಿದೆ. ಭಯಾನಕ ದೃಶ್ಯದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಈ ಘಟನೆಗೆ ಭಾರೀ ಖಂಡನೆ ವ್ಯಕ್ತವಾಗಿದ್ದು, ಸೂಕ್ತ ಕ್ರಮಕ್ಕಾಗಿ ಎಲ್ಲೆಡೆ ಆಗ್ರಹಿಸಲಾಗುತ್ತಿದೆ.

ವರದಿಗಳ ಪ್ರಕಾರ, ಈ ಘಟನೆ ರಾಜ್ಯ ರಾಜಧಾನಿ ಇಂಫಾಲದಿಂದ ಸುಮಾರು 35 ಕಿ.ಮೀ ದೂರದಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೇ 4 ರಂದು ನಡೆದಿದೆ. ಇಬ್ಬರು ಮಹಿಳೆಯರನ್ನು ಸಮೀಪದ ಹೊಲಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಸ್ಥಳೀಯ ಬುಡಕಟ್ಟು ಸಂಘಟನೆ ಆರೋಪಿಸಿದೆ.

ಈ ಘಟನೆ ನಡೆದ ಹಿಂದಿನ ದಿನವಷ್ಟೇ ಪರಿಶಿಷ್ಟ ಪಂಗಡದ ಮೀಸಲಾಗಿಗಾಗಿ ಮೈತೇಯ್ ಸಮುದಾಯದವರ ಬೇಡಿಕೆಯ ಕುರಿತು ಮೈತೇಯ್ ಹಾಗೂ ಕುಕಿ ಬುಡಕಟ್ಟು ಸಮುದಾಯದವರ ನಡುವೆ ಭಾರೀ ಘರ್ಷಣೆ ಏರ್ಪಟ್ಟಿತ್ತು. ಇದೀಗ ವೀಡಿಯೋಗೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯರು ಕುಕಿ ಸಮುದಾಯಕ್ಕೆ ಸೇರಿದವರು ಎಂದು ಸ್ಥಳೀಯ ಬುಡಕಟ್ಟು ನಾಯಕರ ವೇದಿಕೆ ತಿಳಿಸಿದೆ. ವೈರಲ್ ಆಗಿರುವ ವೀಡಿಯೋದಲ್ಲಿ ಮೈತೇಯ್ ಸಮುದಾಯದ ಪುರುಷರ ಗುಂಪೊಂದು ಕುಕಿ ಜನಾಂಗಕ್ಕೆ ಸೇರಿದ ಇಬ್ಬರು ಮಹಿಳೆಯರನ್ನು ಸಾಮೂಹಿಕ ಅತ್ಯಾಚಾರ ಮಾಡಲು ಭತ್ತದ ಗದ್ದೆಗೆ ಎಳೆದುಕೊಂಡು ಹೋಗುವುದನ್ನು ತೋರಿಸುತ್ತದೆ. ಪುರುಷರ ಗುಂಪು ಮಹಿಳೆಯರನ್ನು ಬೆತ್ತಲಾಗಿಸಿ, ರಸ್ತೆಯಲ್ಲಿ ಮೆರವಣಿಗೆ ಮಾಡಿದ್ದಲ್ಲದೇ ಅವರಿಗೆ ಕಿರುಕುಳ ನೀಡಿದ್ದಾರೆ. ಮಹಿಳೆಯರು ಅಸಹಾಯಕತೆಯಿಂದ ಅಳುತ್ತ ತಮ್ಮನ್ನು ಬಿಡುವಂತೆ ಮನವಿ ಮಾಡಿರುವುದೂ ವೀಡಿಯೋದಲ್ಲಿ ಕಂಡುಬಂದಿದೆ.

- Advertisement -

Related news

error: Content is protected !!