Sunday, June 14, 2026
spot_imgspot_img
spot_imgspot_img

ನೀರಿನ ಸಂಪ್ ಸ್ವಚ್ಛತೆ ವೇಳೆ ಇಬ್ಬರು ಕಾರ್ಮಿಕರು ಸಾವು

- Advertisement -
- Advertisement -

ನೀರಿನ ಸಂಪ್ ಸ್ವಚ್ಛತೆಗಿಳಿದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಶಿಕಾರಿಪಾಳ್ಯದ ವಾಜಪೇಯಿ ಸರ್ಕಲ್ ಬಳಿಯ ಕಾರ್ಖಾನೆಯಲ್ಲಿ ನಡೆದಿದೆ.

ಇದೇ ವೇಳೆ ಕಾರ್ಮಿಕರನ್ನು ರಕ್ಷಣೆ ಮಾಡಲು ಹೋಗಿ ಅಸ್ವಸ್ಥಗೊಂಡ ಕಂಪನಿ ಮಾಲೀಕ ಹಾಗೂ ಮತ್ತೊಬ್ಬ ಕಾರ್ಮಿಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಿಹಾರ ಮೂಲದ ಕಾರ್ಮಿಕರಾದ ಚಂದನ್ ರಜ್ ಬನ್ ಸಿಂಗ್(31), ಪಿಂಟು ರಜ್ ಬನ್ ಸಿಂಗ್(22) ಮೃತಪಟ್ಟವರು. ಶ್ರೀನಿವಾಸ್ ರೆಡ್ಡಿ ಎಂಬುವವರ ಸನ್ ಶೈನ್ ಹೋಲ್ಡಿಂಗ್ ಕಂಪನಿಯಲ್ಲಿ ದುರ್ಘಟನೆ ನಡೆದಿದೆ. ಸಂಜೆ ಸಂಪ್‌ನಲ್ಲಿ ಕ್ಲೀನ್‌ ಮಾಡಲು ಕಾರ್ಮಿಕರು ಇಳಿದಿದ್ದರು. ಆ್ಯಸಿಡ್ ಹಾಕಿ ಸ್ವಚ್ಛಗೊಳಿಸುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ಮೃತರು ಸಹೋದರರಾಗಿದ್ದು, ಒಟ್ಟಿಗೆ ಕೆಲಸ ಮಾಡುತ್ತಿದ್ದರು. ಇವರನ್ನು ಉಳಿಸಲು ಮುಂದಾಗಿದ್ದ ಜಗದೀಶ್ ಹಾಗೂ ಮಾಲೀಕ ಶ್ರೀನಿವಾಸ್ ರೆಡ್ಡಿ ಅಸ್ವಸ್ಥಗೊಂಡಿದ್ದು, ಸದ್ಯ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!