Saturday, July 25, 2026
spot_imgspot_img
spot_imgspot_img

ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು

- Advertisement -
- Advertisement -

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಹಿರಿಯಡ್ಕ ಜೈಲಿನಲ್ಲಿರುವ ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಲಯ ಶನಿವಾರ (ಆ.23) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮಹೇಶ್ ಶೆಟ್ಟಿ ತಿಮರೋಡಿಯ ಜಾಮೀನು ಅರ್ಜಿ ವಿಚಾರಣೆಯನ್ನು ಆ. 23ರಂದು ಬೆಳಗ್ಗೆ 11ರಿಂದ ಉಡುಪಿಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯದಲ್ಲಿ ನಡೆದಿದ್ದು ಅರ್ಜಿ ವಿಚಾರಣೆ ವೇಳೆ ಸಹಾಯಕ ಸರಕಾರಿ ಅಭಿಯೋಕರು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಲಯದ ಮುಂದೆ ನಿವೇದನೆ ಮಾಡಿದ್ದಾರೆ. ಅದರಂತೆ ಮಧ್ಯಾಹ್ನ ಒಂದು ಗಂಟೆಯ ಒಳಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಿತ್ತು ಆದರೆ ಪೊಲೀಸರು ಹಿರಿಯಡ್ಕ ಜೈಲಿನಲ್ಲಿದ್ದ ತಿಮರೋಡಿ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಮಧ್ಯಾಹ್ನ 1:30 ಸುಮಾರಿಗೆ ಕೋರ್ಟಿಗೆ ಹಾಜರು ಪಡಿಸಿದರು ಈ ವೇಳೆ ಪೊಲೀಸರನ್ನೇ ತೀವ್ರ ತರಾಟೆಗೆ ತೆಗೆದುಕೊಂಡ ನ್ಯಾಯಾಧೀಶರು ನಿಮ್ಮಲ್ಲಿಯೇ ವೈಫಲ್ಯ ಇರುವಾಗ ಮತ್ತೆ ಕಸ್ಟಡಿಗೆ ಯಾಕೆ ಎಂದು ಪ್ರಶ್ನೆ ಮಾಡಿ ಮಧ್ಯಾಹ್ನ 3.30 ಕ್ಕೆ ಕೋರ್ಟ್ ಗೆ ಹಾಜರು ಪಡಿಸುವಂತೆ ಸೂಚಿಸಿದೆ.ಅದರಂತೆ ಸಂಜೆ ವಿಚಾರಣೆ ನಡೆಸಿದ ನ್ಯಾಯಾಲಯ ತಿಮರೋಡಿ ಅವರ ಅರೋಗ್ಯದ ದೃಷ್ಟಿಯಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.

- Advertisement -

Related news

error: Content is protected !!