Thursday, August 6, 2026
spot_imgspot_img
spot_imgspot_img

ಉಡುಪಿ: ಬಾರ್ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!

- Advertisement -
- Advertisement -

ಉಡುಪಿ: ಉಡುಪಿ ತಾಲೂಕಿನ ಮಣಿಪುರ ಗ್ರಾಮದ ದೆಂದೂರ್‌ಕಟ್ಟೆಯ ಬಾರ್ ಬಳಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.

ಮೃತಪಟ್ಟ ವ್ಯ್ಕತಿಯನ್ನು ಅಶೋಕ್ ದೇವಾಡಿಗ (40) ಎಂದು ಗುರುತಿಸಲಾಗಿದೆ.

ಬಾರ್ ಬಳಿಯ ಪೊದೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರು ಪತ್ತೆಯಾಗಿದ್ದಾರೆ. ಮಾಹಿತಿ ತಿಳಿದ ನಂತರ ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮತ್ತು ಸ್ಥಳೀಯ ನಿವಾಸಿಗಳು ಅವರನ್ನು ಅಜ್ಜರಕಾಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಆದರೆ ಆ ವ್ಯಕ್ತಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ವ್ಯಕ್ತಿಯ ಸಾವಿನ ಕಾರಣವನ್ನು ತಿಳಿಯಲು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!