Sunday, June 29, 2025
spot_imgspot_img
spot_imgspot_img

ಉಡುಪಿ: ನೇಜಾರಿನಲ್ಲಿ ನಾಲ್ವರ‌ನ್ನು ಹತ್ಯೆಗೈದ ಪ್ರಕರಣ; ಸಂಜೆಯೊಳಗೆ ಚಿತ್ರಣ : ಉಡುಪಿ ಎಸ್ಪಿ ಮಾಹಿತಿ

- Advertisement -
- Advertisement -

ಉಡುಪಿ: ನೇಜಾರಿನಲ್ಲಿ ಒಂದೇ ಕುಟುಂಬದ ನಾಲ್ವರ‌ನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆಯಾಮದಲ್ಲಿ ತನಿಖೆ ಮಾಡುತ್ತಿದ್ದೇವೆ. ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದಿದ್ದು ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದು ಉಡುಪಿ ಎಸ್ ಪಿ ಡಾ. ಅರುಣ್ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಪ್ರವೀಣ್ ಅರುಣ್ ಚೌಗಲೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದೇವೆ, ಟೆಕ್ನಿಕಲ್ ಮತ್ತು ಹ್ಯೂಮನ್ ಇಂಟೆಲಿಜೆನ್ಸ್ ಮೇರೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸುತ್ತಿದ್ದೇವೆ ಸಂಜೆಯೊಳಗೆ ತನಿಖೆ ಮಾಡಿ ಪೂರ್ಣ ಚಿತ್ರಣ ಸಿಗಲಿದೆ ಎಂದರು.

ಇನ್ನು ಪ್ರವೀಣ್ ಅರುಣ್ ಚೌಗಲೆಯನ್ನು ಉಡುಪಿ ಜಿಲ್ಲೆ ಮತ್ತು ಬೆಳಗಾವಿ ಜಿಲ್ಲೆಯ ಪೊಲೀಸರ ಸಹಕಾರದಿಂದ ವಶಕ್ಕೆ ಪಡೆಯಲಾಗಿದ್ದು, ಹಲವಾರು ಶಂಕಿತರ ವಿಚಾರಣೆ ಮಾಡುತ್ತಿದ್ದೇವೆ. ಜಿಲ್ಲೆಯ ಎಲ್ಲಾ ಕಡೆ ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಿದ್ದೇವೆ. ಬಲವಾದ ಶಂಕೆಯ ಮೇರೆಗೆ ಪ್ರವೀಣ್ ಅರುಣ್ ಚೌಗಲೆ ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!