- Advertisement -
- Advertisement -
ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ಸಮುದ್ರಕ್ಕೆ ಬಿದ್ದು ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಮೀನುಗಾರ ಅಂಕೋಲಾ ತಾಲೂಕಿನ ಅಣ್ಣಕೃಷ್ಣ ತಿಮ್ಮಪ್ಪ (48) ಎಂದು ಗುರುತಿಸಲಾಗಿದೆ.
ಡಿ. 25ರಂದು ಬೆಳಗ್ಗಿನ ಜಾವ ಅರಬಿ ಸಮುದ್ರದಲ್ಲಿ 13 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ಕೆಲಸ ಮಾಡುತ್ತಿರುವಾಗ ಆಯತಪ್ಪಿ ಬೋಟಿನಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ತಕ್ಷಣ ಜತೆಯಲ್ಲಿದ್ದವರು ಹುಡುಕಾಡಿದರೂ ಪತ್ತೆಯಾಗಲಿಲ್ಲ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -