- Advertisement -
- Advertisement -





ಉಡುಪಿ: ಬಡಾನಿಡಿಯೂರು ಗ್ರಾಮದ ಕದಿಕೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಒಡಿಶಾ ರಾಜ್ಯದ ಗಂಜಮ್ ಜಿಲ್ಲೆಯ ಮಾತುರಾ ಡೆಂಗಾಪದರ ಬಡಾಶಿ ಮೂಲದ ಸಂಜಯ್ ಸ್ಟೈನ್(41) ಎಂಬವರು ಎ.18ರಿಂದ ನಾಪತ್ತೆಯಾಗಿದ್ದಾರೆ.
ಮಲ್ಪೆ ಹಾಗೂ ಉಡುಪಿಯ ಪರಿಸರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಇವರು, ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಹಿಂದಿ ಹಾಗೂ ಒಡಿಶಾ ಭಾಷೆ ಮಾತನಾಡುತ್ತಾರೆ.
ಈ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆಠಾಣೆ ದೂ.ಸಂಖ್ಯೆ: 0820- 2537999, ಪಿ.ಎಸ್.ಐ ಮೊ.ನಂ:9480805447 ಹಾಗೂ ಉಡುಪಿ ವೃತ್ತ ನಿರೀಕ್ಷಕರು ಮೊ.ನಂ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -