Saturday, June 13, 2026
spot_imgspot_img
spot_imgspot_img

ಉಡುಪಿ: ಮಲಗಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ..!

- Advertisement -
- Advertisement -

ಉಡುಪಿ: ಚಿರತೆಯೊಂದು ಜಗುಲಿ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಘಟನೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೊಟ್ಟು ಬಳಿ ನಡೆದಿದೆ.

ಗಾಯಗೊಂಡ ವ್ಯಕ್ತಿ ಬಿಹಾರ ಮೂಲದ ಸುರೇಂದ್ರ (55) ಎಂದು ಗುರುತಿಸಲಾಗಿದೆ.

ಆತ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ರಾಜೇಶ್‌ ಅವರ ಮನೆ ಬಳಿಯ ಕಲ್ಲೊಟ್ಟು ಸಂತೋಷ್‌ ಪೂಜಾರಿ ಅವರ ಮನೆಯ ವರಾಂಡದಲ್ಲಿ ಮಲಗಿದ್ದು, ರಾತ್ರಿ ಚಿರತೆ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ. ಕೆನ್ನೆ, ಗಲ್ಲ ಮತ್ತು ಮುಖಕ್ಕೆ ಗಾಯಗೊಳಿಸಿದ್ದು ರಕ್ತದ ಕೋಡಿ ಹರಿದಿದೆ. ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ದಾಳಿ ನಡೆಸಿದ ಚಿರತೆಯೊಂದಿಗೆ ಮರಿ ಚಿರತೆಯೂ ಇತ್ತು ಎನ್ನಲಾಗಿದೆ.

- Advertisement -

Related news

error: Content is protected !!