Friday, June 5, 2026
spot_imgspot_img
spot_imgspot_img

ಉಡುಪಿ: ಕೆಲಸಕ್ಕೆಂದು ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ಫೀಡ್ಸ್ ಕಾಯಿಲೆಯಿಂದ ಬಳಲುತ್ತಿರುವ, ಮದ್ಯ ಸೇವನೆಯ ಅಭ್ಯಾಸ ಹೊಂದಿದ್ದ ವ್ಯಕ್ತಿಯೋರ್ವರು ಮನೆಯಿಂದ ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸು ಬಾರದೇ ನಾಪತ್ತೆಯದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ವ್ಯಕ್ತಿಯನ್ನು ಬ್ರಹ್ಮಾವರ ತಾಲೂಕು ಹಲುವಳ್ಳಿ ಗ್ರಾಮದ ನೂಜಿ ಹೊಳೆಬಾಗಿಲು ನಿವಾಸಿ ವಿಜಯ ನಾಯ್ಕ (50) ಎಂದು ಗುರುತಿಸಲಾಗಿದೆ.

ವಿಜಯ ನಾಯ್ಕ ಎಂಬವರು ಎ. 10ರಂದು ಮನೆಯಿಂದ ಕೆಲಸಕ್ಕೆಂದು ಹೊರಗೆ ಹೋದವರು ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ 5 ಇಂಚು ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಹಿಂದಿ ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಠಾಣೆ ದೂ.ಸಂಖ್ಯೆ: 0820-2561044, ಪಿ.ಎಸ್.ಐ ಮೊ.ನಂ: 9480805453, ಬ್ರಹ್ಮಾವರ ವೃತ್ತ ಕಚೇರಿ ದೂ.ಸಂಖ್ಯೆ: 0820-2561966, ಉಡುಪಿ ಉಪವಿಭಾಗ ಡಿವೈಎಸ್‌ಪಿ ಕಚೇರಿ ದೂ.ಸಂಖ್ಯೆ: 0820-2521257 ಹಾಗೂ ಉಡುಪಿ ಕಂಟ್ರೋಲ್‌ ರೂಂ ನಂ: 0820-2526444ನ್ನು ಸಂಪರ್ಕಿಸಬಹುದು ಎಂದು ಬ್ರಹ್ಮಾವರ ಪೊಲೀಸ್‌ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!