Tuesday, July 23, 2024
spot_imgspot_img
spot_imgspot_img

ಉಡುಪಿ: ಉತ್ತರಾಖಂಡ ಚಾರಣಕ್ಕೆ ತೆರಳಿದ್ದ ಕುಂದಾಪುರ ಮೂಲದ ವ್ಯಕ್ತಿ ಮೃತ್ಯು..!

- Advertisement -G L Acharya panikkar
- Advertisement -

ಉಡುಪಿ: ಉತ್ತರಾಖಂಡದ ಸಹಸ್ತ್ರ ತಾಲ್​ ಶಿಖರಕ್ಕೆ ಚಾರಣಕ್ಕೆ ತೆರಳಿ ಹವಾಮಾನ ವೈಪರಿತ್ಯದಿಂದ ಕುಂದಾಪುರ ಮೂಲದ ಓರ್ವ ವ್ಯಕ್ತಿಯೂ ಮೃತಪಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿ ಕುಂದಾಪುರದ ಕುಂಭಾಶಿಯ ಪದ್ಮನಾಭ ಭಟ್ ಎಂದು ಗುರುತಿಸಲಾಗಿದೆ.

ಚಾರಣಕ್ಕೆ ತೆರಳಿದ್ದ 22 ಜನರ ತಂಡದಲ್ಲಿ ಪದ್ಮನಾಭ ಭಟ್ ಕೂಡ ಇದ್ದರು. ಪದ್ಮನಾಭ ಭಟ್ ಅವರು ಮೂಲತಃ ಕುಂಭಾಶಿಯವರು. ಆದರೆ, ಇವರು ಬೆಂಗಳೂರಿನಲ್ಲಿ ವಾಸವಾಗಿದ್ದರು. ಮೇ 29ರಂದು 22 ಜನರ ತಂಡದೊಂದಿಗೆ ಉತ್ತರಕಾಶಿಯ ಸಹಸ್ತ್ರ ತಾಲ್​ಗೆ ಚಾರಣಕ್ಕೆ ತೆರಳಿದ್ದರು. ಚಾರಣ ಮುಗಿಸಿ ಕೆಳಗೆ ಬರುವಾಗ ಹವಾಮಾನ ವೈಪರಿತ್ಯದಿಂದ ದುರ್ಘಟನೆ ಸಂಭವಿಸಿದೆ.

ದುರ್ಘಟನೆಯಲ್ಲಿ ಒಟ್ಟು 9 ಜನ ಮೃತಪಟ್ಟಿದ್ದಾರೆ. ಇನ್ನು, ಅಪಾಯಕ್ಕೆ ಸಿಲುಕಿದ್ದ 13 ಜನರನ್ನು ರಕ್ಷಣೆ ಮಾಡಲಾಗಿದ್ದು, ಇವರು ಗುರುವಾರ ರಾತ್ರಿ 9:30ರ ಸುಮಾರಿಗೆ ವಿಮಾನದ ಮೂಲಕ ಬೆಂಗಳೂರಿಗೆ ಬಂದರು. ರಕ್ಷಣಾ ಕಾರ್ಯಚರಣೆ ಉಸ್ತುವಾರಿಗೆ ತೆರಳಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರೂ ಈ ಚಾರಣಿಗರ ಜೊತೆಗೆ ಬಂದಿದ್ದಾರೆ.

ಬುಧುವಾರ ಐದು ಮೃತದೇಹಗಳು ಸಿಕ್ಕಿದ್ದವು. ಗುರುವಾರ ಮತ್ತೆ ಕಾರ್ಯಾಚರಣೆ ಆರಂಭಿಸಿ ನಾಲ್ವರು ಮೃತದೇಹಗಳನ್ನು ಪತ್ತೆ ಹಚ್ಚಲಾಗಿತ್ತು. 9 ಮೃತದೇಹಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದೀಗ, ದೆಹಲಿಯಿಂದ ಎರಡು ಪ್ರತ್ಯೇಕ ಇಂಡಿಗೋ ವಿಮಾನಗಳಲ್ಲಿ 4 ಮೃತದೇಹಗಳು ಬೆಂಗಳೂರಿಗೆ ಬಂದಿವೆ. ಮೃತರನ್ನು ಪದ್ಮನಾಭ್, ಸಿಂಧೂ, ಸುಜಾತಾ, ವಿನಾಯಕ್ ಎಂದು ಗುರುತಿಸಾಲಗಿದೆ. ಈಗಾಗಲೇ ಮೂವರ ಮೃತದೇಹಗಳು ಕುಟುಂಬದವರಿಗೆ ಹಸ್ತಾಂತರ ಮಾಡಲಾಗಿದೆ. ಮತ್ತೆರಡು ಮೃತದೇಹಗಳು ಮಧ್ಯಾಹ್ನ ಬರಲಿವೆ. ಪದ್ಮನಾಭ್ ಅವರ ಮೃತದೇಹವನ್ನು ಕುಂದಾಪುರಕ್ಕೆ ತೆಗೆದುಕೊಂಡು ಹೋಗಲು ಆ್ಯಂಬುಲೇನ್ಸ್ ವ್ಯವಸ್ಥೆ ಮಾಡಲಾಗಿದೆ.

- Advertisement -

Related news

error: Content is protected !!