- Advertisement -
- Advertisement -



ಉಡುಪಿ: ವ್ಯಕ್ತಿಯೋರ್ವರು ಮನೆಯಿಂದ ಹೋದವರು ವಾಪಸ್ ಬಾರದೆ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ವ್ಯಕ್ತಿ ಪೆರ್ಡೂರು ಗ್ರಾಮದ ಕಲ್ಲುಬೆಟ್ಟು ನಿವಾಸಿ ರವಿಕುಮಾರ್ (34) ಎಂದು ಗುರುತಿಸಲಾಗಿದೆ.
ಇವರು ಜುಲೈ 15 ರಂದು ಮನೆಯಿಂದ ಹೋದವರು ವಾಪಸು ಬಾರದೆ ಕಾಣೆಯಾಗಿದ್ದಾರೆ. 5 ಅಡಿ 4 ಇಂಚು ಎತ್ತರ, ಎಣ್ಣೆಯುಕ್ತ ಕಂದು ಮೈಬಣ್ಣ ಮತ್ತು ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಅವರು ಕನ್ನಡ, ತುಳು, ಹಿಂದಿ ಮತ್ತು ಇಂಗ್ಲಿಷ್ ಮಾತನಾಡುತ್ತಾರೆ. ಇವರ ಬಗ್ಗೆ ಯಾರಿಗಾದರೂ ಮಾಹಿತಿ ಇದ್ದಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಲು ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ.
- Advertisement -








