Thursday, August 13, 2026
spot_imgspot_img
spot_imgspot_img

ಉಡುಪಿ: ಮನೆಯಿಂದ ಹೋರ ಹೋದ ವ್ಯಕ್ತಿ ವಾಪಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ಬೆಳಗಾವಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ನಾಪತ್ತೆಯಾದ ವ್ಯಕ್ತಿ ಚಿಟ್ಟಾಡಿ ನಿವಾಸಿ ರವೀಂದ್ರ ಭಟ್ (38) ಎಂದು ಗುರುತಿಸಲಾಗಿದೆ.

ಇವರು ಜೂನ್ 11 ರಂದು ಬೆಳಗಾವಿಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ಈವರೆಗೂ ವಾಪಸ್ಸು ಬಾರದೇ ಕಾಣೆಯಾಗಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿಯು 5 ಅಡಿ 6 ಇಂಚು ಎತ್ತರ, ಸಾಧಾರಣ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಟಕಣೆ ತಿಳಿಸಿದೆ.

- Advertisement -

Related news

error: Content is protected !!