Sunday, June 14, 2026
spot_imgspot_img
spot_imgspot_img

ಉಡುಪಿ: ಕಾಲೇಜಿಗೆ ತೆರಳುವುದಾಗಿ ಹೇಳಿ ಹೋದ ವಿದ್ಯಾರ್ಥಿನಿ ವಾಪಾಸು ಬಾರದೇ ನಾಪತ್ತೆ..!

- Advertisement -
- Advertisement -

ಉಡುಪಿ: ಡಿಗ್ರಿ ಅಂತಿಮ ವರ್ಷದ ವಿದ್ಯಾರ್ಥಿನಿ ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಕಾಪು ತಾಲೂಕು ಪಡು ಗ್ರಾಮದಲ್ಲಿ ನಡೆದಿದೆ.

ನಾಪತತ್ತೆಯಾದ ವಿದ್ಯಾರ್ಥಿನಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಕವಿತಾ (20) ಎಂದು ಗುರುತಿಸಲಾಗಿದೆ.

ಕವಿತಾ ಡಿಸೆಂಬರ್ 20 ರಂದು ಕಾಲೇಜಿಗೆ ತೆರಳುವುದಾಗಿ ಮನೆಯಲ್ಲಿ ಹೇಳಿ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಕವಿತಾ 5 ಅಡಿ 2 ಇಂಚು ಎತ್ತರ, ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ:0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂಖ್ಯೆ: 0820-2534777 ಹಾಗೂ ಜಿಲ್ಲಾ ನಿಸ್ತಂತು ಕೊಠಡಿ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!