- Advertisement -
- Advertisement -
ಉಡುಪಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಮಲ್ಪೆ ಬೀಚ್‌ನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಬೆಂಗಳೂರು ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ.
ನಾಗೇಂದ್ರ ಅವರು ತನ್ನ ಐವರು ಸ್ನೇಹಿತರೊಂದಿಗೆ ಮಲ್ಪೆ ಬೀಚ್‌ಗೆ ಬಂದಿದ್ದರು ಎನ್ನಲಾಗಿದೆ. ಇನ್ನು ಘಟನೆಯ ಮಾಹಿತಿ ಪಡೆದ ಸ್ಥಳೀಯ ಜೀವ ರಕ್ಷಕರು ಮತ್ತು ಈಶ್ವರ ಮಲ್ಪೆ ಕೂಡಲೇ ಸ್ಥಳಕ್ಕೆ ಆಗಮಿಸಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಆತನನ್ನು ರವಾನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ನಾಗೇಂದ್ರ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
- Advertisement -