Saturday, May 11, 2024
spot_imgspot_img
spot_imgspot_img

ಉಡುಪಿ: ಯುವತಿ ನಾಪತ್ತೆ..!

- Advertisement -G L Acharya panikkar
- Advertisement -

ಉಡುಪಿ: ಯುವತಿಯೋರ್ವರು ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ವಿನಿತಾ (22)ನಾಪತ್ತೆಯಾದ ಯುವತಿ.

ಅ. 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಅಕ್ಕನಲ್ಲಿ ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ತನ್ನ ಮನೆಯಿಂದ ಹೋದವರು ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದಾರೆ. ಬಿ.ಕಾಂ. ಪದವೀಧರೆಯಾಗಿದ್ದ ಈಕೆ ಪ್ರಸ್ತುತ ಉಡುಪಿ ಎಂಜಿಎಂ ಕಾಲೇಜ್ ಬಳಿಯ ಎಲೆಕ್ಟ್ರಿಕಲ್ ಬೈಕ್ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು.

ಆಕೆ ಉಪಯೋಗಿಸುತ್ತಿದ್ದ ಮೊಬೈಲ್ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿದ್ದು, ಆಕೆಯ ಸ್ನೇಹಿತರಲ್ಲಿ, ಸಂಬಂಧಿಕರ ಮನೆಯಲ್ಲಿ ಆಸುಪಾಸಿನಲ್ಲಿ ಹುಡುಕಾಡಿದ್ದು, ಈ ತನಕ ಪತ್ತೆಯಾಗಿರುವುದಿಲ್ಲ ಎಂದು ಸಹೋದರ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!