- Advertisement -
- Advertisement -


ಉಡುಪಿ: ಮನೆಯಿಂದ ಹೊರಗೆ ಹೋದ ಯುವತಿ ವಾಪಾಸು ಬಾರದೇ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.
ನಾಪತ್ತೆಯಾದ ಯುವತಿ ನಗರದ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂದು ಗುರುತಿಸಲಾಗಿದೆ.
ಯುವತಿ ನ.14ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡು ತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸ ಬಹುದು ಎಂದು ಪ್ರಕಟಣೆ ತಿಳಿಸಿದೆ.
- Advertisement -