- Advertisement -
- Advertisement -


ಉಡುಪಿ: ಯುವತಿಯೋರ್ವಳು ಕಾಲೇಜಿಗೆ ಫೀಸು ಕಟ್ಟಲೆಂದು ಮನೆಯಿಂದ ಹೋದವರು ವಾಪಾಸು ಬಾರದೆ ನಾಪತ್ತೆಯಾದ ಘಟನೆ ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಬೈಲೂರು ಬಬ್ಬುಸ್ವಾಮಿ ದೇವಸ್ಥಾನದ ಬಳಿ ನಡೆದಿದೆ.
ನಾಪತ್ತೆಯಾದ ಯುವತಿಯನ್ನು ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಮೂಲತಃ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಸಹನಾ (24) ಎಂದು ಗುರುತಿಸಲಾಗಿದೆ.
ಸಹನಾ ಎಂಬ ಯುವತಿಯು ಸೆಪ್ಟಂಬರ್ 4 ರಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಕಾಲೇಜಿಗೆ ಫೀಸು ಕಟ್ಟಲೆಂದು ಮನೆಯಿಂದ ಹೋದವರು ವಾಪಾಸು ಬಾರದೆ ನಾಪತ್ತೆಯಾಗಿರುತ್ತಾರೆ.
5 ಅಡಿ 9 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.
- Advertisement -








