Wednesday, July 2, 2025
spot_imgspot_img
spot_imgspot_img

ಉಡುಪಿ: ಬಸ್‌ಗಳ ನಡುವೆ ಅಪಘಾತ; ಹಲವು ಮಂದಿಗೆ ಗಾಯ..!

- Advertisement -
- Advertisement -

ಉಡುಪಿ: ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಹಲವು ಮಂದಿ ಗಾಯಗೊಂಡ ಘಟನೆ ಇಂದ್ರಾಳಿಯಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ದುರ್ಗಾಂಬ ಬಸ್‌ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಪಘಾತದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!