Saturday, May 4, 2024
spot_imgspot_img
spot_imgspot_img

ಉಡುಪಿ: ಭೀಕರ ಕಾರು ಅಪಘಾತ; ಓರ್ವ ಮೃತ್ಯು , ನಾಲ್ವರು ಗಂಭೀರ

- Advertisement -G L Acharya panikkar
- Advertisement -

ಉಡುಪಿ: ಕೋಟೆಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದ ಭೀಕರ ಕಾರು ಅಪಘಾತದಲ್ಲಿ ಉದ್ಯಾವರ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

ಭೀಕರ ಅಪಘಾತದಲ್ಲಿ ಉದ್ಯಾವರ ಸಂಪಿಗೆನಗರದ ನಿವಾಸಿ ರೊಬರ್ಟ್ ಕ್ಯಾಸ್ಟಲಿನೋ ಅವರ ಪುತ್ರ ಜೋಯಿಸ್ಟನ್ ಕ್ಯಾಸ್ಟಲಿನೋ(22) ಮೃತಪಟ್ಟ ದುರ್ದೈವಿ. ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಉಡುಪಿ ಕಡೆ ಬರುತ್ತಿರುವಾಗ ಕೋಟೇಶ್ವರ ಬಳಿ ಕೆಟ್ಟು ನಿಂತಿದ್ದ ಟ್ರಕ್‌ಗೆ ಫಿಗೋ ಕಾರು ಡಿಕ್ಕಿ ಹೊಡೆದಿದೆ.

ಕಾರಿನಲ್ಲಿದ್ದ ಲೆಸ್ಟನ್ ಪಿಂಟೋ(22), ಜಸ್ಟಿನ್ ಕರ್ಡೊಜ (22), ವಿಲ್ಸನ್ ಮಾರ್ಟಿಸ್(23), ಗ್ಲಾಡ್‌ಸನ್ ಡಿಸಿಲ್ವ (23)ಗಾಯಗೊಂಡವರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರು ಉದ್ಯಾವರ ಐಸಿವೈಎಂ ಘಟಕದ ಸದಸ್ಯರು ಎಂದು ತಿಳಿದುಬಂದಿದೆ.

- Advertisement -

Related news

error: Content is protected !!