Friday, June 5, 2026
spot_imgspot_img
spot_imgspot_img

ಉಡುಪಿ: ಸ್ಕೂಟರ್ ಮೇಲೆ ವಿದ್ಯುತ್ ತಂತಿ ಬಿದ್ದು ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು..!

- Advertisement -
- Advertisement -

ಉಡುಪಿ: ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿ ಕುಂಜಾರುಗಿರಿ ನಿವಾಸಿ, ಮಣಿಪಾಲ ಪ್ರಸ್‌ನ ಯುನಿಟ್ 5ರಲ್ಲಿ ಉದ್ಯೋಗದಲ್ಲಿದ್ದ ಕುಂಜಾರುಗಿರಿ ಶಶಿಧರ್ ಶೆಟ್ಟಿ (42) ಎಂದು ಗುರುತಿಸಲಾಗಿದೆ.

ಶಶಿಧರ್ ಅವರು ಜುಲೈನಲ್ಲಿ ಮಣಿಪಾಲದ ಕೈಗಾರಿಕಾ ಪ್ರದೇಶದಲ್ಲಿ ಸ್ಕೂಟರ್‌ನಲ್ಲಿ ಚಲಿಸುತ್ತಿದ್ದ ವೇಳೆ ಗಾಳಿ-ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು, ಕಳೆದ 2 ತಿಂಗಳಿನಿಂದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಮೃತರು ತಾಯಿ, ಪತ್ನಿ, ಪುತ್ರನನ್ನು ಅಗಲಿದ್ದಾರೆ.

- Advertisement -

Related news

error: Content is protected !!