Thursday, June 18, 2026
spot_imgspot_img
spot_imgspot_img

ಉಡುಪಿ: ನೇಣು ಬಿಗಿದು ಆಟೋ ಚಾಲಕ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಉಡುಪಿ: ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕನೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕಟಪಾಟಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಆಟೋ ಚಾಲಕ ಕಟಪಾಡಿಯ ಪಳ್ಳಿಗುಡ್ಡೆ ನಿವಾಸಿ ದೀಪಕ್ ಆರ್(34) ಎಂದು ಗುರುತಿಸಲಾಗಿದೆ.

ಜನವರಿ 1 ರಂದು ದೀಪಕ್ ತನ್ನ ಕೋಣೆಯಲ್ಲಿ ಕಬ್ಬಿಣದ ಕೊಕ್ಕೆಯಿಂದ ನೇಣು ಬಿಗಿದುಕೊಂಡಿದ್ದಾನೆ ಎಂದು ವರದಿಯಾಗಿದೆ. ದೀಪಕ್ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ದೀಪಕ್ ಉಡುಪಿಯ ಕಲ್ಸಂಕ ಆಟೋ ಸ್ಟ್ಯಾಂಡ್‌ನಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ತಮ್ಮ ಸರಳ ಸ್ವಭಾವ ಮತ್ತು ಸ್ನೇಹಪರ ನಡವಳಿಕೆಗೆ ಹೆಸರಾಗಿರುವ ದೀಪಕ್ ಅವರು ಅವಿವಾಹಿತರಾಗಿದ್ದರು.

ಇನ್ನು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!