Friday, June 5, 2026
spot_imgspot_img
spot_imgspot_img

ಉಡುಪಿ: ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬೈಕ್‌; ಸವಾರ ಗಂಭೀರ ಗಾಯ…!

- Advertisement -
- Advertisement -

ಉಡುಪಿ: ಯುವಕ ಚಲಾಯಿಸುತ್ತಿದ್ದ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಲ್ಲಿಗೆ ಡಿಕ್ಕಿ ಹೊಡೆದು ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆಯ ಎರ್ಮಾಳು ಗರೋಡಿ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಎರ್ಮಾಳು ಗುಜ್ಜಿ ನಿವಾಸಿ ಸೈಫಾನ್ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೈಫಾನ್ ಅವರು ಪಡುಬಿದ್ರೆ ಕಡೆಯಿಂದ ಎರ್ಮಾಳಿನ ತನ್ನ ಮನೆಗೆ ಹೋಗುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಕಲ್ಲಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಗಾಯಳುವನ್ನು ತಕ್ಷಣ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಪಡುಬಿದ್ರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!